ನವದೆಹಲಿ:
ಚಾರಿತ್ರಿಕ ಅಯೋಧ್ಯೆ ಭೂ ವಿವಾದದ ಬಗ್ಗೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ. ಆದರೆ,ಈ ತೀರ್ಪು ನಮಗೆ ತೃಪ್ತಿ ತಂದಿಲ್ಲ ಿದರ ವಿಷಯವಾಗಿ ನಾವು ತೀರ್ಪು ಮರುಪರಿಶೀಲನಾ ಅರ್ಜಿ ಸಲ್ಲಿಸುತ್ತೇವೆ ಎಂದು ಸುನ್ನಿ ವಕ್ಫ್ ಬೋರ್ಡ್ ತಿಳಿಸಿದೆ.
ತೀರ್ಪು ಹೊರಬಂದ ಬಳಿಕ ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ ಜಾಗ ನೀಡಿಕೆ ಸರಿಯಾದ ನಿರ್ಧಾರವಲ್ಲ.ತೀರ್ಪಿನಲ್ಲಿ ಕೆಲ ಸಂಗತಿಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಲಾಗುವುದು ಎಂದು ತಿಳಿಸಿದ್ದಾರೆ.ನಮ್ಮ ಜಾಗವನ್ನು ಬೇರೆಯವರಿಗೆ ನೀಡಲಾಗಿದೆ.ತೀರ್ಪು ಮರು ಪರಿಶೀಲನೆ ಕೋರಿ ಮನವಿ ಸಲಿಸುವುದಾಗಿ ಬೋರ್ಡ್ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
