ಗುವಾಹಟಿ
ಪೌರತ್ವ ಕಾಯ್ದೆಯ ಕಿಚ್ಚು ಇನ್ನು ಆರಿಯೇ ಇಲ್ಲಾ ಈ ಸಂದರ್ಭದಲ್ಲಿ ಅಸ್ಸಾಂ ಮುಖ್ಯಮಂತ್ರಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಒಂದು ಕಡೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶವ್ಯಾಪ್ತಿ ಪ್ರತಿಭಟನೆ ನಡೆಯುತ್ತಿದೆ.
ಇದರ ಮಧ್ಯೆ ಸ್ಪಷ್ಟನೆ ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಅಕ್ರಮ ವಲಸಿಗರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಮಾತನಾಡಿರುವ ಅಸ್ಸಾಂ ಸಿಎಂ, ಬಾಂಗ್ಲಾದೇಶ ದಿಂದ ವಲಸೆ ಬರುವ ಒಬ್ಬರಿಗೂ ಅಸ್ಸಾಂನಲ್ಲಿ ನೆಲೆಸಲು ಜಾಗ ನೀಡುವುದಿಲ್ಲ ಎಂದಿದ್ದಾರೆ. ಅಸ್ಸಾಂನ ಪ್ರಜೆಗಳ ಭಾಷೆ ಹಾಗೂ ಹಕ್ಕಿಗೆ ಯಾವುದೇ ಧಕ್ಕೆ ಬಾರದಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದ್ದಾರೆ.
ದಶಕಗಳ ಹಿಂದೆ ವಲಸೆ ಬಂದು ಇಲ್ಲಿಯೇ ನೆಲೆಸಿದವರಿಗೆ ಭಾರತದ ಪೌರತ್ವವನ್ನು ನೀಡುವ ಬಗ್ಗೆ ಪೌರತ್ವ ತಿದ್ದುಪಡಿ ಕಾಯ್ದೆ ಉಲ್ಲೇಖಿಸಿದೆ. ಅದೇ ವಿಚಾರದ ಬಗ್ಗೆ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲಾ ಸ್ಪಷ್ಟನೆ ನೀಡಿದ್ದಾರೆ. ನೆರೆ ರಾಷ್ಟ್ರದಲ್ಲಿನ ಅಲ್ಪಸಂಖ್ಯಾತರು ಧಾರ್ಮಿಕ ಕಿರುಕುಳದಿಂದ ನೊಂದು ದಶಕಗಳ ಹಿಂದೆಯೇ ಅಸ್ಸಾಂಗೆ ವಲಸೆ ಬಂದಿರುವ ಮುಸ್ಲಿಮೇತರ ಪ್ರಜೆಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಇದರಿಂದ ಅಸ್ಸಾಂನ ಮೂಲ ನಿವಾಸಿಗಳಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ