ಅಯೋಧ್ಯೆ ತೀರ್ಪು : ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ಸಹಕಾರವಿದೆ: ಕಾಂಗ್ರಸ್

ನವದೆಹಲಿ

     ಅಯೋಧ್ಯಾ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಕಾಂಗ್ರಸ್ ತಿಳಿಸಿದೆ.ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ, ‘ಸುಪ್ರೀಂಕೋರ್ಟ್ ತೀರ್ಪು ಹೊರಬಂದಿದೆ. ನಾವು ತೀರ್ಪನ್ನು ಸ್ವಾಗತಿಸುತ್ತೇವೆ ಮತ್ತು ರಾಮಮಂದಿರ ನಿರ್ಮಾಣದ ಪರವಾಗಿದ್ದೇವೆ ಎಂದು ತಿಳಿಸಿದ್ದಾರೆ.

     ಈ ವಿವಾದವನ್ನು ಬಳಸಿಕೊಂಡು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದ ಬಿಜೆಪಿ ಮತ್ತು ಇತರರಿಗೆ ಬಾಗಿಲನ್ನು ಮುಚ್ಚಿದೆ’ ಎಂದು ಬಿಜೆಪಿ ವಿರುದ್ಧ ಕೂಡ ಹರಿಹಾಯ್ದರು. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ರಾಮಮಂದಿರ ನಿರ್ಮಾಣದ ಪರವಾಗಿ ನಿರ್ಣಯ ಕೈಗೊಂಡಿದೆ. ಎಲ್ಲ ಪಕ್ಷಗಳು ಮತ್ತು ಸಮುದಾಯಗಳು ಜಾತ್ಯತೀತ ನಿಲುವಿಗೆ ಬದ್ಧರಾಗಿ ಹಾಗೂ ಸಂವಿಧಾನಾತ್ಮಕ ನಿಯಮಗಳಿಗೆ ಅನುಗುಣವಾಗಿ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವಂತೆ ಕಾಂಗ್ರೆಸ್ ಮನವಿ ಮಾಡಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link