ನವದೆಹಲಿ:
ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ವ್ಯಾಪಕ ಹಾನಿ ಮಾಡಿದ್ದ ಅಂಫಾನ್ ಚಂಡಮಾರುತ ದುರಂತ ಹಸಿರಾಗಿರು ವಂತೆಯೇ ಇತ್ತ ಭಾರತಕ್ಕೆ ಮತ್ತೆ ಚಂಡಮಾರುತ ಭೀತಿ ಆರಂಭವಾಗಿದೆ.
ಮುಂದಿನ ಎರಡು ಮೂರು ದಿನಗಳಲ್ಲಿ ಗುಜರಾತ್ ಮತ್ತು ಉತ್ತರ ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ. ಜೂನ್ 3ರಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಮುಂಬೈ ಮೂಲದ ಪ್ರಾದೇಶಿಕ ಹವಾಮಾನ ಕೇಂದ್ರವು ಚಂಡಮಾರುತದ ಬೆಳವಣಿಗೆಗಳ ಮತ್ತು ತೀವ್ರತೆ ಮೇಲೆ ನಿಗಾ ಇರಿಸಿದೆ.