ನವದೆಹಲಿ
ಪ.ಬಂಗಾಳದಲ್ಲಿ ಬುಲ್ ಬುಲ್ ಚಂಡಮಾರುತದ ಭೀತಿ ಎದುರಾಗಿದೆ, ಚಂಡಮಾರುತ ಪರಿಣಾಮವಾಗಿ ಇಬ್ಬರು ಸಾವನ್ನಪ್ಪಿದ್ದಾರೆ, ಹಲವಡೆಗೆ ಭೂಕುಸಿತ ಉಂಟಾಗಿದೆ , ವ್ಯಾಪಕ ಮಳೆಯಾಗುತ್ತಿದೆ, ಈ ಮಳೆಗೆ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ಬುಲ್ ಬುಲ್ ಚಂಡಮಾರುತ ತೀವ್ರವಾಗಿದ್ದು, ಗಂಟೆಗೆ 110ರಿಂದ 120 ಕಿಮೀ ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಭಾರೀ ಪ್ರಮಾಣದ ಮಳೆಯಿಂದಾಗಿ ಪಶ್ಚಿಮ ಬಂಗಾಳದ ಜಗತ್ ಸಿಂಗ್ ಪುರ, ಕೇಂದ್ರಪಾರ, ಭದ್ರಕ್ ಮತ್ತು ಬಲಸೋರ್ ಜಿಲ್ಲೆಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಮತ್ತು ಬೆಳೆಗಳಿಗೆ ಹಾನಿಯುಂಟಾ ಗಿದೆ.
ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿದ್ದು, ಪ್ರವಾಹ ಎದುರಾಗುವ ಸಂಭವವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಒಡಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಮುನ್ನೆಚ್ಚರಿಕಾ ಕ್ರಮವಾಗಿ ಹೈಅಲರ್ಟ್ ಘೋಷಣೆ ಮಾಡಿವೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿ ಸಲಾಗಿದೆ.13 ಕರಾವಳಿ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ರಜೆಯನ್ನೂ ಈಗಾಗಸೇ ಸರ್ಕಾರ ರದ್ದುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ