ನವದೆಹಲಿ:
ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಮನೆಯಲ್ಲೇ ಇದ್ದು ಜನತಾ ಕರ್ಫ್ಯೂ ಆಚರಿಸಿ, ಸಂಜೆ 5 ಗಂಟೆಗೆ ಮನೆಯಲ್ಲಿಯೇ ಚಪ್ಪಾಳೆ ತಟ್ಟಿ ಆರೋಗ್ಯ ಇಲಾಖೆಯವರಿಗೆ ಗೌರವ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಚಪ್ಪಾಳೆ ತಟ್ಟುವುದರಿಂದ ಏನೂ ಪ್ರಯೋಜನವಿಲ್ಲ. ಕೊರೋನಾ ವೈರಸ್ ದೇಶದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮವನ್ನು ಬೀರಿದೆ. ಇದು ಬಡವರ ಮೇಲೆ ಪರಿಣಾಮ ಬೀರುತ್ತಿದ್ದು ನಗದು ಸಹಾಯ, ತೆರಿಗೆ ವಿನಾಯಿತಿ ಮತ್ತು ಸಾಲ ಮರುಪಾವತಿಯಲ್ಲಿ ವಿನಾಯಿತಿ ನೀಡುವ ಅವಶ್ಯಕತೆ ಇದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಸಣ್ಣ ಮತ್ತು ಮಧ್ಯಮ ಉದ್ಯಮಿಗಳು ಹಾಗೂ ದೈನಂದಿನ ಕೂಲಿ ಕಾರ್ಮಿಕರ ಬಗ್ಗೆ ಶೀರ್ಘವೇ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವನ್ನು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ