ಕೊಚ್ಚಿ:

ವಿವಾದಿತ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರೋಧಿಸಿ ಹಿಂದೂ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಮಿತಿ ಮೀರುತ್ತಿರುವಂತೆಯೇ ಇತ್ತ ಕೇರಳದಲ್ಲಿರುವ ಖ್ಯಾತ ವಾವರ್ ಮಸೀದಿಯೊಳಗೆ ಪ್ರವೇಶ ಮಾಡಲು ಯತ್ನಿಸಿದ ಮಹಿಳೆಯರನ್ನು ಬಂಧಿಸಿರುವುದಾಗಿ ಅಲ್ಲಿನ ಪೊಲೀಸರು ತಿಳಿಸಿದ್ದಾರೆ
ಎರುಮೇಲಿಯಲ್ಲಿರುವ ವಾವರ್ ಮಸೀದಿಗೆ ಭೇಟಿ ನೀಡಲು ಹೊರಟಿದ್ದ ಮೂವರು ಮಹಿಳೆಯರು ಸೇರಿದಂತೆ ಒಟ್ಟು ಆರು ಜನರನ್ನು ಬಂಧಿಸಲಾಗಿದೆ ತಿಳಿದುಬಂದಿದೆ. ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಸೃಷ್ಟಿಸಲು ಈ ಆರೂ ಜನ ಯತ್ನಿಸುತ್ತಿದ್ದರು ಎಂಬ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
