ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ..!

ನವದೆಹಲಿ :

    ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಯಮುನಾ ನದಿಗೆ ಒಳ ಹರಿವು ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ .

   ಈ ವರೆಗೆ ಭಾರಿ ಮಳೆಗೆ ಕನಿಷ್ಠ 28 ಜನರು ಸಾವನ್ನಪ್ಪಿದ್ದು ,22 ಮಂದಿ ನಾಪತ್ತೆಯಾಗಿದ್ದಾರೆ, ದೆಹಲಿ, ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಯಮುನಾ ಮತ್ತು ಇತರ ನದಿಗಳಲ್ಲಿ ಪ್ರವಾಹ ಎಚ್ಚರಿಕೆಯನ್ನು ನೀಡಲಾಗಿದೆ.ಯಮುನಾ ನದಿಗೆ ಕಟ್ಟಲಾಗಿರುವ ಹಾಥಿನಿ ಕುಂದ್ ಬ್ಯಾರೇಜ್ ನಿಂದ ಸುಮಾರು 8.14 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ 

    ಯಮುನಾ ನದಿಯಲ್ಲಿನ ನೀರಿನ ಮಟ್ಟವು ಇಂದು ಅಪಾಯದ ಮಟ್ಟ ದಾಟಿದೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ಪ್ರವಾಹಪೀಡಿತ ಪ್ರದೇಶಗಳಲ್ಲಿ ಸ್ಥಳ ಪರಿಶೀಲನೆ ನಡೆಸಲು ಸಂಬಂಧಪಟ್ಟ ಇಲಾಖೆ ಗಳಿಗೆ ಸೂಚನೆ ನೀಡಿದ್ದಾರೆ.ಮತ್ತು ಪ್ರವಾಹದಿಂದ ಹೆಚ್ಚಿಗೆ ಪ್ರಾಣ ಹಾನಿಯಾಗದಂತೆ ಎಚ್ಚರವಹಿಸಿ ಎಂದು ತಿಳಿಸಿದ್ದಾರೆ. 

  .   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link