ಮಸೀದಿ ನಿರ್ಮಾಣಕ್ಕೆ 5 ಕಡೆ ಜಾಗ ಗುರುತಿಸಿದ ಯೋಗಿ ಸರ್ಕಾರ

ಲಖನೌ:

   ಅಯೋಧ್ಯೆ ತೀರ್ಪಿನ ಜೊತೆಯಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶದ ಪ್ರಕಾರವಾಗಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ಸೂಕ್ತವಾದ  ಐದು ಸ್ಥಳಗಳನ್ನು ಉತ್ತರಪ್ರದೇಶ ಸರ್ಕಾರ ಗುರುತಿಸಿದೆ.   

    ಬಾಬರಿ ಮಸೀದಿ, ರಾಮಜನ್ಮ ಭೂಮಿ  ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನಂತೆ ಮಸೀದಿ ನಿರ್ಮಾಣಕ್ಕೆ ಸುನ್ನಿ ಮಂಡಳಿಗೆ 5 ಎಕರೆ ಜಮೀನು ಕೊಡುವಂತೆ ಆದೇಶ ಮಾಡಿತ್ತು ಅದರನ್ವಯ ಸರ್ಕಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ 5 ಸ್ಥಳಗಳನ್ನು ಗುರುತು ಮಾಡಿದೆ 
 
    ಇನ್ನು ಸರ್ಕಾರ ಗುರುತಿಸಿರುವ ಸ್ಥಳಗಳೆಂದರೆ ಮಿರ್ಜಾಪುರ್, ಶಂಶುದ್ದೀನ್ ಪುರ್ ಮತ್ತು ಚಾಂದ್ ಪುರ್ ನಲ್ಲಿ ಐದು ಸೂಕ್ತ ನಿವೇಶನಗಳನ್ನು ಗುರುತಿಸಿದ್ದು, ಈ ಪ್ರದೇಶ ಪವಿತ್ರ ಸ್ಥಳ ಎಂದು ಗುರುತಿಸಿರುವ ಪಂಚ್ ಕೋಶಿ ಪರಿಕ್ರಮದಿಂದ ಸುಮಾರು 15 ಕಿಲೋ ಮೀಟರ್ ದೂರದಲ್ಲಿದೆ ಎಂದೂ ವರದಿ ತಿಳಿಸಿದೆ.
 
   ಸುನ್ನಿ ವಕ್ಫ್ ಬೋರ್ಡ್ ಟ್ರಸ್ಟಿಗಳು ಈ ಸ್ಥಳವನ್ನು ಪರಿಶೀಲಿಸಿ ಮಸೀದಿ ನಿರ್ಮಾಣಕ್ಕೆ ಯಾವ ಸ್ಥಳ ಸೂಕ್ತ ಎಂಬುದನ್ನು ತಿಳಿಸಲಿ ಎಂದು ಉತ್ತರಪ್ರದೇಶ ಸರ್ಕಾರ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link