ವೈನಾಡ್ :
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ, ಕೇರಳದ ಕಾಂಗ್ರೆಸ್ ಮುಖಂಡ ಓಂ ಜಾರ್ಜ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ .
ಓಂ ಜಾರ್ಜ್ ಅವರು 17 ವರ್ಷದ ಅಪ್ರಾಪ್ತ ಬಾಲಕಿಗೆ ಎರಡು ವರ್ಷಗಳಿಂದ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದು ಬಂದಿದೆ. ಬಾಲಕಿಯ ಪೋಷಕರು ಜಾರ್ಜ್ ಮನೆಯ ಕೆಲಸದಾಳುಗಳಾಗಿದ್ದು, ಎರಡು ವರ್ಷಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆ ಕುರಿತು ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜಾರ್ಜ್ ವಿರುದ್ದ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ತಮ್ಮ ನಾಯಕನ ವಿರುದ್ಧ ಗಂಭೀರ ಆರೋಪ ಕೇಳಿ ಬರುತ್ತಿದ್ದಂತೇ ಜಾರ್ಜ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ೆಂದು ತಿಳಿಒದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
