ನವದೆಹಲಿ
ಕಾಂಗ್ರೆಸ್ ಪಕ್ಷದಲ್ಲಿ ರಾಜೀನಾಮೆಗಳ ಪರ್ವ ನಡೆಯುತ್ತಿದ್ದು ಇದೀಗ ಪಂಜಾಬ್ ಸಚಿವ ನವ್‌ಜೋತ್ ಸಿಂಗ್ ಸಿಧು ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ ಎಂಬ ಕಾಂಗ್ರೆಸ್ ಆರೋಪವನ್ನು ಬಿಜೆಪಿ ಖಂಡಿಸಿ ಅದು ಕಾಂಗ್ರೆಸ್ ಆಂತರಿಕ ವಿಚಾರ ಎಂದು ಹೇಳಿದೆ.
ಅದು ಕಾಂಗ್ರೆಸ್ ನ ಆಂತರಿಕ ವಿಚಾರ. ಕಳೆದ ವರ್ಷ ನವ್‌ಜೋತ್ ಸಿಂಗ್ ಸಿಧು ಬಾಲಾಕೋಟ್ ವಾಯುದಾಳಿ ಶಂಕೆ ಮೊದಲಾದ ಅನೇಕ ವಿವಾದಾತ್ಮಕ ಹೇಳಿಕೆ ನೀಡಿದ್ದರು ಎಂದು ಬಿಜೆಪಿ ನಾಯಕ ನಳಿನ್ ಕೊಹ್ಲಿ ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
ಸಿಧು ರಾಜೀನಾಮೆಗೆ ಕಾರಣ ಕಾಂಗ್ರೆಸ್ ಗೆ ತಿಳಿದಿರಬೇಕು, ಅವರ ವಿವಾದಾತ್ಮಕ ಹೇಳಿಕೆಗಳನ್ನು ಬಿಜೆಪಿ ಪ್ರಶ್ನಿಸುತ್ತಲೇ ಬಂದಿದೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜೀನಾಮೆ ಸಲ್ಲಿಕೆ ಪ್ರಕ್ರಿಯೆಗೆ ಚುರುಕು ನೀಡಿದ್ದಾರೆ. ಅವರು ಸ್ವತಃ ರಾಜೀನಾಮೆ ನೀಡಿ ಇತರರೂ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ವ್ಯಂಗ್ಯವಾಡಿದ್ದಾರೆ.
My letter to the Congress President Shri. Rahul Gandhi Ji, submitted on 10 June 2019. pic.twitter.com/WS3yYwmnPl
— Navjot Singh Sidhu (@sherryontopp) July 14, 2019
ಇದೀಗ ಬಿಜೆಪಿಯನ್ನು ಆರೋಪಿಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ಸ್ವಯಂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಕುಟುಂಬ ರಾಜಕಾರಣದಲ್ಲಿ ತೊಡಗಿದರೆ ಇಂತಹ ಸ್ಥಿತಿ ಎದುರಾಗುತ್ತದೆ ಎಂದು ಅವರು ಹೇಳಿದ್ದಾರೆ. ಇಂದು ಪಂಜಾಬ್ ಸಚಿವ ಸಂಪುಟಕ್ಕೆ ನವ್‌ಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿ, ಜೂನ್ 10 ರ ದಿನಾಂಕದ ರಾಜೀನಾಮೆ ಪತ್ರವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
