ಭಾರತದಲ್ಲಿ ಮೊದಲ ಬಲಿ ಪಡೆದ ಕೊರೋನಾ ವೈರಸ್ ..!?

ಕೊಚ್ಚಿ:

    ಮಾರಣಾತಿಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಕೇರಳದ ಎರ್ನಾಕುಲಂ ನಲ್ಲಿ ವರದಿಯಾಗಿದೆ.

    ಏರ್ನಾಕುಲಂನ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಗೆ ತುತ್ತಾಗಿದ್ದ ವ್ಯಕ್ತಿ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿಗಳು ಹೇಳಿದ್ದಾರೆ. ಈ ಹಿಂದೆ ಸಾವನ್ನಪ್ಪಿದ ವ್ಯಕ್ತಿಯಿಂದ ಪಡೆಯಲಾಗಿದ್ದ ರಕ್ತದ ಮಾದರಿಯಲ್ಲಿ ಕೊರೋನಾ ವೈರಸ್ ನೆಗೆಟಿವ್ ಎಂದು ವರದಿ ಬಂದಿತ್ತು. ಎರಡನೇ ರಕ್ತದ ಮಾದರಿಯ ಪರೀಕ್ಷೆಯ ವರದಿ ಇನ್ನೂ ಬಂದಿಲ್ಲ. ಹೀಗಾಗಿ ಆತ ಕೊರೋನಾ ವೈರಸ್ ನಿಂದಲೇ ಸಾವನ್ನಪ್ಪಿದ್ದಾನೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಏರ್ನಾಕುಲಂನ ವೈದ್ಯಕೀಯ ಕಾಲೇಜು ಸೂಪರಿಂಟೆಂಡ್ ಪೀಟರ್ ವಿಜಯಿಲ್ ಹೇಳಿದ್ದಾರೆ.

     ‘ಕಣ್ಣೂರು ಜಿಲ್ಲೆಯ ಪಯ್ಯನ್ನೂರ್ ಮೂಲದ ವ್ಯಕ್ತಿ ಮಲೇಷ್ಯಾದಿಂದ ನೇಡುಮಾಬಸ್ಸೆರಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಗುರುವಾರ ರಾತ್ರಿ ಜ್ವರ ಮತ್ತು ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ರಕ್ತದ ಮಾದರಿಯನ್ನು ಅಳಪುಳದಲ್ಲಿರುವ ವಿರಾಲಜಿ ಲ್ಯಾಬ್ ಗೆ ಕಳುಹಿಸಲಾಗಿತ್ತು. ಮೊದಲ ಸ್ಯಾಂಪಲ್ ನ ವರದಿ ಬಂದಿದ್ದು, ಎರಡನೇ ಸ್ಯಾಂಪಲ್ ನ ವರದಿ ಇನ್ನು ಬಂದಿಲ್ಲ ಎಂದು  ಪೀಟರ್ ವಿಜಯಿಲ್ ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ