ಲಕ್ನೋ:

ದೇಶದಲ್ಲಿ ಮುಂಚೂಣಿ ಹಿಂದುತ್ವ ಸಂಘಟನೆಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಅವಹೆಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಉಲ್ಲೆಮ್ಮಾ ಜಮೀರ್ ನಕ್ವಿ ಎಂಬುವರು ಅಜಂ ಖಾನ್ ವಿರುದ್ಧ ದೂರು ದಾಖಲಿಸಿದ್ದಾರೆ, ಹಿಂದೂ ಧರ್ಮಕ್ಕೆ ಅವಮಾನ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.








