ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!!

ನವದೆಹಲಿ:

     ದೇಶದಲ್ಲಿ ಕೆಲ ದಿನಗಳಿಂದ ಸಂಚಲನ ಮೂಡಿಸಿರುವ ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಇಂದು ವಜಾಗೊಳಿಸಿದ್ದಾರೆ.ಕಾಂಗ್ರೆಸ್ ನಾಯಕ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

      ಐ ಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಚಿದಂಬರಂ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.2007ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯಲ್ಲಿ ಕೆಲವು ಅವ್ಯವಹಾರ ಮೂಲಕ ಐಎನ್‌ಎಕ್ಸ್ ಮೀಡಿಯಾ ಹೌಸ್‌ಗೆ “ನೆರವು’ ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದು, 305 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಿಬಿಐ ಅಧಿಕಾರಿಗಳು 2007ರಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಚಿದಂಬರಂ ಪುತ್ರ ಕಾರ್ತಿ ವಿರುದ್ಧ ಎರಡು ಪ್ರಕರಣ ದಾಖಲಿಸಲಾಗಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap