ಗಡಿಯಲ್ಲಿ ನೇಪಾಳ ಸೇನೆಯಿಂದ ದಾಳಿ: ಒಂದು ಸಾವು

ಪಾಟ್ನಾ

     ಬಿಹಾರದಲ್ಲಿನ  ಭಾರತ-ನೇಪಾಳ ಗಡಿಯಲ್ಲಿ ನೇಪಾಳ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಬಿಹಾರದ ಸೀತಾಮರಿ ಜಿಲ್ಲೆಯ ಭಾರತ-ನೇಪಾಳ ಗಡಿಯಲ್ಲಿ ನೇಪಾಳ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಆರೋಪ ಕೇಳಿಬಂದಿದ್ದು ಸೀಮಾ ಸುರಕ್ಷಾ ಬಲ(ಎಸ್ಎಸ್ ಬಿ) ಖಚಿತಪಡಿಸಿದೆ .ಗುಂಡಿನ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯನ್ನು 25 ವರ್ಷದ ದಿಕೇಶ್ ಕುಮಾರ್ ಎಂದು ಹಾಗೂ ಗಾಯಗೊಂಡವರನ್ನು ಉಮೇಶ್ ರಾಮ್ ಮತ್ತು ಉದಯ್ ಠಾಕೂರ್ ಎಂದು ಗುರುತಿಸಲಾಗಿದೆ.

     ಈ ಗುಂಡಿನ ದಾಳಿಗೆ ಸಂಬಂಧಿಸಿದಂತೆ ನಾವು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ. ಜಿಲ್ಲಾಡಳಿತ ಕ್ರಮ ತೆಗೆದು ಕೊಳ್ಳಲಿದೆ . ನಾವು ಎಲ್ಲವನ್ನೂ ನಿರ್ವಹಿಸುತ್ತಿದ್ದೇವೆ ಎಂದು ಎಸ್ಎಸ್ ಬಿ ಮಹಾ ನಿರ್ದೇಶಕ ಸಂಜಯ್ ಕುಮಾರ್ ಅವರು ತಿಳಿಸಿದ್ದಾರೆ.ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನೇಪಾಳ ಸೇನೆ ಭಾರತೀಯ ನಾಗರಿಕರನ್ನು ವಶಕ್ಕೆ ಪಡೆದಿದೆ ಎಂದು ಸ್ಥಳೀಯರು ಹೇಳಿರುವುದಾಗಿ ಸಂಜಯ್ ಕುಮಾರ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link