ದೆಹಲಿ : ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥತಿ ಹೇರಿದ ಸುಪ್ರೀಂ..!

ನವದೆಹಲಿ:

       ದೆಹಲಿ ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕ ತುರ್ತು ಆರೋಗ್ಯ ಪರಿಸ್ಥತಿ ಘೋಷಿಸಿರುವ ಸುಪ್ರೀಂ ಕೋರ್ಟ್ ಇದೇ 5ರವರೆಗೆ ಎಲ್ಲಾ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದ್ದು . ರಾಜಧಾನಿಯಲ್ಲಿ ವಾಯು ಗುಣಮಟ್ಟ ಗಂಭೀರವಾಗಿ ಇಳಿದಿದ್ದು ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಚಳಿಗಾಲದಲ್ಲಿ ಪಟಾಕಿಗಳನ್ನು ಸಿಡಿಸುವುದಕ್ಕೆ ನಿಷೇಧ ಹೇರಿದೆ.

     ಈ ಕುರಿತು ದೆಹಲಿ, ಹರ್ಯಾಣ, ರಾಜಸ್ತಾನ, ಉತ್ತರ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಪ್ರಾಧಿಕಾರ ಅಧ್ಯಕ್ಷ ಭುರೆ ಲಾಲ್, ದೆಹಲಿ ಮತ್ತು ಎನ್ ಸಿಆರ್ ಪ್ರದೇಶಗಳಲ್ಲಿ ವಾಯುಮಾಲಿನ್ಯ ಮಟ್ಟ ತೀರಾ ಹದಗೆಟ್ಟಿದ್ದು ಈಗ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಅದರಲ್ಲೂ ಮುಖ್ಯವಾಗಿ ಮಕ್ಕಳ ಹಿತದೃಷ್ಟಿಯಿಂದ ಈ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link