ಮುಂಬೈ:
ಅಮೆರಿಕದ ಫೆಡರಲ್ ಬ್ಯಾಂಕ್ ತನ್ನ ಬಡ್ಡಿದರದ ಏರಿಳಿತದ ಕುರಿತು ನಿರ್ಣಯ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ರೂಪಾಯಿ ಮೌಲ್ಯ ಧಿಡೀರ್ ಕುಸಿತಕಂಡಿದೆ.
ಬೆಳಗ್ಗೆ ಮಾರುಕಟ್ಟೆ ಆರಂಭವಾಗುತ್ತಿದ್ದಂತೆಯೇ ರೂಪಾಯಿ ಮೌಲ್ಯದಲ್ಲಿ ಸುಮಾರು 11 ಪೈಸೆಯಷ್ಟು ಕುಸಿತ ಕಂಡಿತ್ತು. ಆ ಮೂಲಕ ಪ್ರಸ್ತುತ ಡಾಲರ್ ಎದುರು ರೂಪಾಯಿ 70.95 ರೂಗಳಷ್ಟಿದೆ ಎಂದು ತಿಳಿದು ಬಂದಿದೆ.
ರೂಪಾಯಿ ಮೌಲ್ಯ ಕುಸಿತಕ್ಕೆ ಪ್ರಮುಖ ಕಾರಣವಾಗಿ ಅಮೆರಿಕ ಫೆಡರಲ್ ಬ್ಯಾಂಕ್ ನಿರ್ಣಯ ಕಾರಣ ಎಂದು ಹೇಳಲಾಗುತ್ತಿದೆ, ಇಂದು ಅಮೆರಿಕ ಫೆಡರಲ್ ಬ್ಯಾಂಕ್ ಸಂಸ್ಥೆ ತನ್ನ ಬಡ್ಡಿದರದ ಕುರಿತು ಮಹತ್ವದ ನಿರ್ಣಯ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಗೆ ಬೇಡಿಕೆ ಹೆಚ್ಚಾಗಿದೆ. ಇದರ ಪರಿಣಾಮ ಭಾರತೀಯ ಷೇರುಮಾರುಕಟ್ಟೆಯ ಮೇಲೂ ಆಗಿದ್ದು, ರೂಪಾಯಿ ಮೌಲ್ಯದಲ್ಲಿ 11 ಪೈಸೆಯಷ್ಟು ಕುಸಿತವಾಗಿದೆ.ಮಂಗಳವಾರದ ವಹಿವಾಟಿನ ಅಂತ್ಯಕ್ಕೆ ರೂಪಾಯಿ ಮೌಲ್ಯ ಪ್ರತೀ ಡಾಲರ್ ಗೆ 70.84 ರೂಗಳಷ್ಟಿತ್ತು ಅಮೆರಿಕದ ಫೆಡರಲ್ ಬ್ಯಾಂಕ್ ನಿರ್ಧಾರದ ಮೇಲೆ ರೂಪಾಯಿ ಮೌಲ್ಯ ನಿಂತಿದೆ ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ.
