2024ರ ವೇಳೆಗೆ ಭಾರತದಲ್ಲಿ 100 ಹೊಸ ವಿಮಾನ ನಿಲ್ದಾಣ ಸ್ಥಾಪನೆ..!

ನವದೆಹಲಿ

     ಏಷ್ಯಾದಲ್ಲಿ ವೇಗವಾಗಿ ಆರ್ಥಿಕ ಬೆಳವಣಿಗೆ ಹೊಂದುತ್ತಿರುವ ಭಾರತ 2024 ರೊಳಗಾಗಿ ಸರಿಸುಮಾರು ಒಂದು ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ 100 ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಸಣ್ಣ ನಗರಗಳು ಹಾಗೂ ಗ್ರಾಮಗಳು ಸೇರಿದಂತೆ ಒಂದು ಸಾವಿರ ಹೊಸ ಮಾರ್ಗಗಳನ್ನು ಸಂಪರ್ಕಿಸುವ ಉದ್ದೇಶದಿಂದ ಈ ಪ್ರಸ್ತಾವನೆ ಸಲ್ಲಿಸಲಾಗಿದೆ ಎನ್ನಲಾಗಿದೆ.2035ರೊಳಗೆ ಚೀನಾ 450 ಕಮರ್ಷಿಯಲ್ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಗುರಿ ಹಾಕಿಕೊಂಡಿದೆ. ಅಲ್ಲದೇ ಹಾಲಿ ಇರುವ ವಿಮಾನ ನಿಲ್ದಾಣಕ್ಕಿಂತ ಅದರ ಸಂಖ್ಯೆ ದ್ವಿಗುಣವಾಗಲಿದೆ ಎಂದು ತಿಳಿಸಿದೆ ಎನ್ನಲಾಗಿದೆ.

    ಕಳೆದ ವಾರ ನಡೆದ ಸಭೆಯಲ್ಲಿ 2025ರ ವೇಳಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕುರಿತು ಪುನರ್ ವಿಮರ್ಶೆ ನಡೆಸಲಾಗಿದ್ದು. ಈ ಹಿನ್ನೆಲೆಯಲ್ಲಿ ದೇಶದಲ್ಲಿ ವಿಮಾನಗಳ ಹಾರಾಟ ಮತ್ತು ಅದರ ಅಗತ್ಯದ ಬಗ್ಗೆ ಜನರ ಅಭಿಪ್ರಾಯದ ವ್ಯಕ್ತವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap