ಜೈಪುರ
ಕಳೆದ ಬಾರಿ ನಡೆದ ಚುನಾವಣೆಯಲ್ಲಿ ತನ್ನ ಚಾಣಾಕ್ಷತನದಿಂದ ರಾಜಸ್ಥಾನದಲ್ಲಿ ಅಧಿಕಾರದ ಗದ್ದಿಗೆ ಹಿಡಿದ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ರಾಜಸ್ತಾನ ಬಿಜೆಪಿ ಯತ್ನಿಸುತ್ತಿದೆ ಎಂದು ರಾಜಸ್ತಾನ ಸಿಎಂ ಆರೋಪಿಸಿದ್ದಾರೆ.
ಈ ಹಿನ್ನಲೆಯಲ್ಲಿ ಪಕ್ಷದ ಹೈಕಮಾಂಡ್ ಭೇಟಿ ಮಾಡಲು 25 ಶಾಸಕರನ್ನು ಕರೆದುಕೊಂಡು ಉಪಮುಖ್ಯಮಂತ್ರಿ ಸಚಿನ್ ಪೈಲಟ್ ದೆಹಲಿಗೆ ತೆರಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕೈ ಶಾಸಕರಲ್ಲದೇ ಕೆಲವು ಪಕ್ಷೇತರ ಶಾಸಕರು ಕೂಡ ಸರ್ಕಾರಕ್ಕೆ ಬೆಂಬಲ ಸೂಚಿಸಲು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಶಾಸಕರಿಗೆ ಆಮಿಷವೊಡ್ಡುವ ಮೂಲಕ ರಾಜ್ಯದ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ರಾಜಸ್ಥಾನದ 24ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಶುಕ್ರವಾರ ರಾತ್ರೋರಾತ್ರಿ ಜಂಟಿ ಹೇಳಿಕೆ ಹೊರಡಿಸಿದ್ದರು. ಬಳಿಕ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಧ್ಯಪ್ರದೇಶದ ಕಮಲನಾಥ್ ಸರ್ಕಾರವನ್ನು ಉರುಳಿಸಿದಂತೆಯೇ ಬಿಜೆಪಿಯು ರಾಜಸ್ಥಾನ ಸರ್ಕಾರವನ್ನೂ ಕೆಡವಲು ಮುಂದಾಗಿದೆ ಎಂದು ಆರೋಪಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ