ಶಿವಮೊಗ್ಗ:
ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯ ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಾಪನೆಗೊಳ್ಳಳಿದ್ದು,ಜೂನ್‌ನಿಂದ ಪ್ರಾರಂಭವಾಗುವ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದರು.
ಅಹಮದಾಬಾದ್‌ನ ರಕ್ಷಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ನಾಟಕಕ್ಕೆ ರಕ್ಷಾ ವಿವಿಯೊಂದನ್ನು ತರುವ ಬಗ್ಗೆ ಚರ್ಚಿಸಲಾಗಿತ್ತು. ಅದರ ಪರಿಣಾಮ ರಾಜ್ಯಕ್ಕೆ ಈ ವಿಶ್ವವಿದ್ಯಾಲಯ ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಶಿವಮೊಗ್ಗದಲ್ಲಿ ಕಾರ್ಯಾರಂಭ ಮಾಡಲಿದೆ. ಅದಕ್ಕಾಗಿ ನವುಲೆ ಸರ್ವೇ ನಂ.12ರಲ್ಲಿ 8 ಎಕರೆ ಭೂಮಿಯನ್ನು ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದಾರೆ. ತಾತ್ಕಾಲಿಕವಾಗಿ ರಾಗಿಗುಡ್ಡದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ವಿವಿ ಆರಂಭವಾಗಲಿದೆ. ಜಿಲ್ಲೆಯ ಯುವಕರಿಗೆ ಹೊಸ ದಿಕ್ಕನ್ನು ತೋರಿಸುತ್ತದೆ. ಉದ್ಯೋಗ ನೀಡುವಲ್ಲಿ ಸಹಕರಿಸುತ್ತದೆ ಎಂದು ಹೇಳಿದರು.
ಇಡೀ ದೇಶದಲ್ಲೇ ಎರಡನೇ ರಕ್ಷಾ ವಿಶ್ವವಿದ್ಯಾಲಯ ಇದಾಗಿದ್ದು, ಭದ್ರತಾ ವಿಷಯಕ್ಕೆ ಸಂಬಂಧಿಸಿ ಕೋರ್ಸುಗಳ ಡಿಪ್ಲೊಮೋ, ಪದವಿ ತರಗತಿಗಳ ಶಿಕ್ಷಣ ನೀಡಲಾಗುವುದು. ಡಿಪ್ಲೊಮೋ ಇನ್ ಪೊಲೀಸ್ ಸೈನ್ಸ್, ಬೇಸಿಕ್ ಕೋರ್ಸ್ ಇನ್ ಕಾರ್ಪೋರೇಟ್ ಸೆಕ್ಯೂರಿಟಿ ಮ್ಯಾನೇಜ್‌ಮೆಂಟ್, ಡಿಪ್ಲೊಮೋ ಇನ ಕ್ರಿಮಿನಲ್ ಇನ್ವೆಸ್ಟಿಗೇಶನ್, ಪಿಜಿ ಡಿಪ್ಲೊಮೋ ಇನ್ ಸೈಬರ್ ಸೆಕ್ಯೂರಿಟಿ ಆಂಡ್ ಸೈಬರ್ ಲಾ. ರೋಡ್ ಟ್ರಾಫಿಕ್ ಸೇಪ್ಟಿ ಮ್ಯಾನೇಜ್‌ಮೆಂಟ್, ದೈಹಿಕ ಸಾಮರ್ಥ್ಯ ನಿರ್ವಹಣೆಯ ಎರಡು ವಾರಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಪಿಜಿ ಡಿಪ್ಲೊಮೋ ಇನ್ ಕೋಸ್ಟಲ್ ಸೆಕ್ಯೂರಿಟಿ ಅಂಡ್ ಎಎಂಪಿ ಲಾ ಎನ್ಫೋರ್ಸ್ಮೆಂಟ್ ಕೋರ್ಸ್ಗಳ ಬೋಧನೆ ಮಾಡಲಾಗುವುದು ಎಂದು ತಿಳಿಸಿದರು.