ಭೋಪಾಲ್:
ಮಧ್ಯ ಪ್ರದೇಶದಲ್ಲಿ ರಾಜಕೀಯ ಸ್ಥಿತ್ಯಂತರದ ನಂತರ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಅವರು ಸದ್ದಿಲ್ಲದೇ 4ನೇ ಬಾರಿ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್ ಮಧ್ಯಪ್ರದೇಶದ 19ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ,ವಯಕ್ತಿಕವಾಗಿ ಶಿವರಾಜ್ ಸಿಂಗ್ ಅವರು ನಾಲ್ಕನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಬಿಜೆಪಿ ರಾಜ್ಯ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಚೌಹಾಣ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು.
ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಸಭೆಯಲ್ಲಿ ಚೌಹಾನ್, ಬಿಜೆಪಿ ರಾಜ್ಯಾಧ್ಯಕ್ಷ ವಿಷ್ಣುದತ್ ಶರ್ಮಾ, ರಾಜ್ಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸುಹಾಸ್ ಭಗತ್, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ನರೋತ್ತಮ್ ಮಿಶ್ರಾ ಸೇರಿದಂತೆ 100ಕ್ಕೂ ಹೆಚ್ಚು ಶಾಸಕರು ಭಾಗವಹಿಸಿದ್ದರು.