ಹಾವೇರಿಯಲ್ಲಿ ಯುವತಿಯ ಹತ್ಯೆ; ಆರೋಪಿ ನಯಾಜ್‌ ಅರೆಸ್ಟ್‌

ಹಾವೇರಿ:

     ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯ ಹತ್ಯೆಯಾಗಿದ್ದು , ಮೂವರ ಮೇಲೆ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಒಬ್ಬನನ್ನು ಬಂಧಿಸಲಾಗಿದ್ದು, ಆರೋಪಿಯನ್ನು ನಯಾಜ್‌ ಎಂದು ಗುರುತಿಸಲಾಗಿದೆ. ಹತ್ಯೆಯಾದ ಯುವತಿಯನ್ನು ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ರಮೇಶ್ ಬ್ಯಾಡಗಿ (22)  ಎಂದು ಗುರುತಿಸಲಾಗಿದೆ. ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢಪಟ್ಟಿದೆ.

    ಮಾ.6 ರಂದು ಯುವತಿಯ ಮೃತದೇಹ ರಾಣೇಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಪತ್ತೆಯಾಗಿತ್ತು. ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಬಳಿಕ ವಾರಸುದಾರರು ಯಾರೂ ಇಲ್ಲದ ಹಿನ್ನೆಲೆ ಮರಣೋತ್ತರ ಪರೀಕ್ಷೆ ನಡೆಸಿ ಕಾನೂನು ಪ್ರಕಾರ ಸ್ವಾತಿ ಶವವನ್ನು ಹೂತು ಹಾಕಲಾಗಿತ್ತು.

    ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢಪಟ್ಟಿದೆ. ಬಳಿಕ ತನಿಖೆ ತೀವ್ರಗೊಳಿಸಿದ ಹಲಗೇರಿ ಪೊಲೀಸರು, ಮಾ.3 ರಂದು ಕಾಣೆಯಾಗಿದ್ದ ಯುವತಿಯ ಗುರುತನ್ನು ಪತ್ತೆಹಚ್ಚಿದ್ದರು. ಮತ್ತೊಂದೆಡೆ ಸ್ವಾತಿ ಪೋಷಕರು, ಹಿರೇಕೇರೂರು ಪೊಲೀಸ್ ಠಾಣೆಯಲ್ಲಿ ಆಕೆ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು ಎಂದು ತಿಳಿದು ಬಂದಿದೆ. 

   ಸ್ವಾತಿ ತಂದೆ ಮೃತಪಟ್ಟಿದ್ದು, ಆಕೆ ತಾಯಿ ಜತೆ ವಾಸವಿದ್ದಲು. ಸದ್ಯ ಮೂವರ ಮೇಲೆ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ಹಲಗೇರಿ ಪೊಲೀಸರು ತೀವ್ರಗೊಳಿಸಿದ್ದಾರೆ. ಹಿಂದು ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಜಸ್ಟೀಸ್ ಫಾರ್ ಸ್ವಾತಿ ಅಭಿಯಾನ ಆರಂಭಿಸಿದ್ದು, ಹಂತಕರನ್ನು ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.

Recent Articles

spot_img

Related Stories

Share via
Copy link