ಶ್ರೀನಗರ:
ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗುವುದಿಲ್ಲ ಎಂಬ ಸುಳಿವು ನೀಡಿದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಮತ್ತು ಮೂರು ಬಾರಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿದ್ದ ಫಾರೂಕ್ ಅಬ್ದುಲ್ಲಾ ಅವರು, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಗುರುವಾರ ಹೇಳಿದ್ದಾರೆ.
ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಬ್ದುಲ್ಲಾ ಅವರು, “ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ, ಎನ್‌ಸಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಐದು ಲೋಕಸಭಾ ಸ್ಥಾನಗಳಿದ್ದು, ಎನ್‌ಸಿ ಮೂರು ಮತ್ತು ಬಿಜೆಪಿ ಎರಡು (ಜಮ್ಮುವಿನಿಂದ ಎರಡೂ ಸ್ಥಾನಗಳು) ಸ್ಥಾನಗಳನ್ನು ಗೆದ್ದಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ