NDRF ನಿಂದ ಬಂದ ಹಣ ಶೀಘ್ರ ರೈತರ ಖಾತೆಗೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :

   ರೈತರಿಗೆ ಬರ ಪರಿಹಾರ ಹಣ ನೀಡುವ ವಿಚಾರವಾಗಿ ಈಗಾಗಲೆ ರಾಜ್ಯ ಸರ್ಕಾರದಿಂದಲೇ ರೈತರಿಗೆ ತಲಾ 2 ಸಾವಿರ ರೂಪಾಯಿ ನೀಡಿದೆ. ಅಲ್ಲದೆ NDRF ನಿಂದಲೂ ಹಣ ಬಂದಿದೆ. ಇದನ್ನು ಕೂಡ ರೈತರಿಗೆ ತಲುಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

   ಇಂದು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಅವರು, ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ ಆಗುತ್ತದೆ. ಕೆಲವು ಕಡೆ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎಂದರು.

   ಪ್ರವಾಹ ಬಂದರೆ ಎದುರಿಸಲು ಜಿಲ್ಲಾಡಳಿತ ಸನ್ನದ್ಧರಾಗಿರಬೇಕು. ಅಗತ್ಯ ಕ್ರಮ ಕೈಗೊಳ್ಳುವಂತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸೂಚಿಸಲಾಗಿದೆ. ಒಂದು ವೇಳೆ ಪ್ರವಾಹ ಬಂದರೆ ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜಂಟಿ ಸುದ್ದಿಗೋಷ್ಠಿಯಲ್ಲಿ ಡಿಸಿ ಹಾಗೂ ಸಿಇಒ ಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಬಳಿಕ ಹೇಳಿಕೆ ನೀಡಿದರು.

   ಕೆರೆಗಳಲ್ಲಿ ಹುಳು ನದಿಗಳಲ್ಲಿ ಅಡಚಣೆಗಳು ಇದ್ದರೆ ತೆರವುಗೊಳಿಸಲು ಸೂಚನೆ ನೀಡಿದ್ದೇನೆ ಯಾವುದೇ ಕಾರಣಕ್ಕೂ ಬಿತ್ತನೆ ಬೀಜ ರಸಗೊಬ್ಬರ ಕೊರತೆ ಆಗಬಾರದು. ಬಿತ್ತನೆ ಬೀಜ ರಸಗೊಬ್ಬರ ಬೇಡಿಕೆ ಗಿಂತ ಹೆಚ್ಚು ದಾಸ್ತಾನು ಮಾಡಲಾಗಿದೆ.ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಸಿದ್ಧರಾಗಿರಬೇಕು ಯಾವುದೇ ಕಾರಣಕ್ಕೂ ಕುಡಿಯುವ ನೀರು ಹಾಗೂ ಮೇವಿಗೆ ಸಮಸ್ಯೆ ಆಗಬಾರದು.

   ಜನರ ಜೀವಕ್ಕೆ ತೊಂದರೆ ಆಗದ ರೀತಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಈ ಹಿಂದೆ ಪ್ರವಾಹ ಬಂದ ಗ್ರಾಮಗಳಲ್ಲಿ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ. ಹವಾಮಾನ ಇಲಾಖೆ ಅಧಿಕಾರಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿ ಇರಬೇಕು. ನಿರ್ಲಕ್ಷ ವಹಿಸಿದರೆ ನೀತಿ ಸಂಹಿತೆ ಬಳಿಕ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ರಾಜ್ಯದ ಎಲ್ಲಾ ಕಡೆ ಕುಡಿಯುವ ನೀರಿನ ಟೆಸ್ಟ್ ಮಾಡುವಂತೆ ಸೂಚಿಸಿದ್ದೇನೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link