NEP ರದ್ದು : ಸರ್ಕಾರದ ವಿರುದ್ಧ ಮಾಜಿ ಸಚಿವರ ವಾಗ್ದಾಳಿ

ಬೆಂಗಳೂರು:

     ಪಠ್ಯಕ್ರಮ ಮತ್ತು ಶಿಕ್ಷಣ ನೀತಿ ಬೇರೆ, ಈ ಜ್ಞಾನ ಸಿಎಂ ಹಾಗೂ ಶಿಕ್ಷಣ ಸಚಿವರಿಗೆ ಇಲ್ಲ. ರಾಜಕೀಯ ಉದ್ದೇಶಕ್ಕಾಗಿ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಎನ್‌ಇಪಿ ಅಳವಡಿಸಿಕೊಳ್ಳದ ರಾಜ್ಯ ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಕಲಿಯುವ ಮತ್ತು ಕಲಿಸುವುದು ಇದು ರಾಷ್ಟ್ರಿಯ ಶಿಕ್ಷಣ ನೀತಿಯ ಪ್ರಮುಖ ಅಂಶ. ಹಳೆಯ ನೀತಿಯಲ್ಲಿ ಇದ್ದ ನ್ಯೂನತೆಗಳನ್ನು ಹೋಗಲಾಡಿಸಿ 34 ವರ್ಷಗಳ ಬಳಿಕ ಹೊಸ ನೀತಿ ತರಲಾಗಿತ್ತು. ಸಮಾನತೆ ಮತ್ತು ಗುಣಮಟ್ಟದ ಶಿಕ್ಷಣ ಕೊಡಬೇಕಿದೆ. ಇದಕ್ಕಾಗಿ 3 ನೇ ರಾಷ್ಟ್ರಿಯ ಶಿಕ್ಷಣ ನೀತಿ ಜಾರಿ ಮಾಡಲಾಗಿತ್ತು. ತಯಾರಿ, ಅಧ್ಯಯನ, ಚರ್ಚೆ ಇಲ್ಲದೆ ಏಕಾಏಕಿ ರಾಷ್ಟ್ರಿಯ ಶಿಕ್ಷಣ ನೀತಿಯನ್ನು ಕೊನೆಗೊಳಿಸುತ್ತೇವೆ ಎಂದು 2024 ರಿಂದ ರಾಜ್ಯ ಶಿಕ್ಷಣ ನೀತಿ ತರುವ ಪ್ರಯತ್ನ ನಡೆಸಿರುವುದು ಖಂಡನೀಯ’ ಎಂದು ಹೇಳಿದರು.

    ರಾಜ್ಯದಲ್ಲಿ ಎನ್‌ಇಪಿ ಯಶಸ್ವಿಯಾಗಿ ಅನುಷ್ಠಾನ ಆಗುತ್ತಿದೆ. ನಾಗಪುರ ಶಿಕ್ಷಣ, ಉತ್ತರ ಭಾರತದ ಶಿಕ್ಷಣ ನೀತಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ವಾಸ್ತವದಲ್ಲಿ ಎನ್‌ಇಪಿ ರಾಜ್ಯ ಸಮಿತಿಯಲ್ಲಿ ಇದ್ದವರೆಲ್ಲ ಕನ್ನಡಿಗರೇ, ರಾಜ್ಯದ ವಿದ್ಯಾರ್ಥಿಗಳ ಹಿತಕ್ಕಾಗಿ ಅತ್ಯುತ್ತಮ ನೀತಿಯನ್ನು ರೂಪಿಸಿದ್ದರು’ ಎಂದು ತಿಳಿಸಿದರು.

    ಕಾಂಗ್ರೆಸ್‌ ಸರ್ಕಾರ ರಚಿಸಿರುವ ರಾಜ್ಯ ಶಿಕ್ಷಣ ನೀತಿಯ ಕಚೇರಿ ಎಲ್ಲಿದೆ? ಸಲಹೆ ಕೊಡಲು ಇಮೇಲ್‌ ಇದೆಯೇ? ವಿನಾಕಾರಣ ರಾಷ್ಟ್ರೀಯ ಶಿಕ್ಷಣ ನೀತಿಯ ವಿರುದ್ಧ ಹೊರಟಿದ್ದಾರೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ