ಹೊಸ ಬಾಂಬ್‌ ಸಿಡಿಸಿದ ಮಾಜಿ ಸಿಎಂ ….!

ದಾವಣಗೆರೆ

   ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಹಳ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತದೆ. ರಾಜ್ಯ ಕಾಂಗ್ರೆಸ್ ಶಾಸಕರ ಅಸಮಾಧಾನದ ಬಗ್ಗೆ ಸಂಸದ ಗೋವಿಂದ ಕಾರಜೊಳ ಅವರ ಹೇಳಿಕೆಯಲ್ಲಿ ಸತ್ಯಾಂಶ ವಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

   ದಾವರಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋವಿಂದ ಕಾರಜೋಳ ಅವರು ಬಿಜೆಪಿಯ ಹಿರಿಯ ಮುಖಂಡ. ಬಹಳ ವರ್ಷದಿಂದ ರಾಜಕಾರಣದಲ್ಲಿದ್ದಾರೆ ಮುತ್ಸದ್ದಿ ರಾಜಕಾರಣಿಯಾಗಿದ್ದಾರೆ. ಅವರು ಪಕ್ಕಾ ಮಾಹಿತಿ ಇಟ್ಟುಕೊಂಡೇ ಹೇಳಿರುತ್ತಾರೆ ಎಂದು ಹೇಳಿದರು.

   ಜನರ ಬಳಿಗೆ ಹೋಗಲು ಅವರಿಗೆ ಮುಖ ಇಲ್ಲ ಶಾಸಕರ ಅನುದಾನ ಇಲ್ಲ . ಆಡಳಿತ ಹದಗೆಟ್ಟಿದೆ , ಅಧಿಕಾರಿಗಳು ಸರ್ಕಾರದ ಮಾತು ಕೇಳುತ್ತಿಲ್ಲ ರಾಜ್ಯದಲ್ಲಿ ಸರ್ಕಾರ ಇದಿಯೋ ಇಲ್ಲ ಎನ್ನುವಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

   ರಾಜ್ಯ ಕಾಂಗ್ರೆಸ್ ಗ್ಯಾರೆಂಟಿ ಹೆಸರಲ್ಲಿ ಓಟು ಪಡೆಯಲು ಬಡವರ, ಸಾಮಾನ್ಯರ ಮೇಲೆ ಹೊರೆಯ ಬರೆ ಎಳೆ ಎಳೆದಿದ್ದು, ಪೆಟ್ರೋಲ್ ಡಿಸೇಲ್ ಸೇರಿದಂತೆ ಎಲ್ಲ ದರ ಹೆಚ್ಚಳ ಮಾಡಿ ಅಧಿಕಾರ ನಡೆಸುವ ನೈತಿಕತೆ ಕಳೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಕಳೆದ ಒಂದು ವರ್ಷದಿಂದ ಬಡವರ, ಜನ ಸಾಮಾನ್ಯರ ವಿರೋಧಿ ನಿಲುವನ್ನು ತಳೆದು ಅಧಿಕಾರ ನಡೆಸುತ್ತಿದೆ. ರಾಜ್ಯವನ್ನು ಆರ್ಥಿಕ ದಿವಾಳಿ ಮಾಡಿದೆ. ಈ ಮೂಲಕ ರಾಜ್ಯವನ್ನ ಹತ್ತು ವರ್ಷ ಹಿಂದಕ್ಕೆ ತಳ್ಳಲಾಗಿದೆ ಎಂದು ಆರೋಪಿಸಿದರು.

   ಓಟು ಪಡೆಯಲು ಗ್ಯಾರಂಟಿ ಹೆಸರಲ್ಲಿ ಬಡವರ ಮೇಲೆ ಹೊರೆ, ಬರೆಯನ್ನು ಎಳೆದಿದೆ. 1 ಲಕ್ಷ 5 ಸಾವಿರ ಕೋಟಿ ರೂ. ಸಾಲದ ಹೊರೆಯನ್ನು ರಾಜ್ಯದ ಜನತೆ ಮೇಲೆ ಹೊರಿಸಿದ್ದಾರೆ. ಮೊದಲು ಮೋಟರ್ ಟ್ಯಾಕ್ಸ್, ಮದ್ಯದ ದರ ಹೆಚ್ಚು ಮಾಡಿ, ಸ್ಟ್ಯಾಂಪ್ ತೆರಿಗೆ ಹೆಚ್ಚಳ ಮಾಡಿದ್ದರು. ಈಗ ಪೆಟ್ರೋಲ್ ಡಿಸೇಲ್ ದರ ಹೆಚ್ಚು ಮಾಡಿದ್ದಾರೆ. ಈ ರಾಜ್ಯ ಸರ್ಕಾರಕ್ಕೆ ರಾಜ್ಯವನ್ನು ಅಳುವ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

  ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ. ಅಭಿವೃದ್ಧಿ ಶೂನ್ಯವಾಗಿದ್ದು, ಅಭಿವೃದ್ದಿಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಶಾಪ ಹಾಕುತ್ತಿದ್ದಾರೆ. ಲೋಕಸಭೆಯಲ್ಲಿ ಹಿನ್ನಡೆ ಆಗಿದ್ದರಿಂದ ಬಡ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಜಮೀನುಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಪಿಯಾಕ್ಕೆ ರಾಜ್ಯ ಸರ್ಕಾರದ ಪಿತ್ರಾರ್ಜಿತ ಆಸ್ತಿಯನ್ನು ಮಾರಾಟ ಮಾಡಿ ಡೀಲ್ ಕೊಟ್ಟಿದ್ದಾರೆ. ಕರ್ನಾಟಕ ಆಳುವ ನೈತಿಕತೆಯನ್ನು ಕಳೆದುಕೊಂಡಿದ್ದು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಅಲ್ಲಿಯವರೆಗೂ ರಾಜ್ಯ ಸರ್ಕಾರದ ವಿರುದ್ದ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಹೇಳಿದರು.

    ಕೊವಿಡ್ ನಂತರ ನಾನು ‌ಮುಖ್ಯಮಂತ್ರಿ ಆಗಿದ್ದಾಗ ಪೆಟ್ರೋಲ್ ಸೆಸ್ ಕಡಿಮೆ ಮಾಡಿದ್ದೆ. ಬೇರೆ ರಾಜ್ಯದ ಪೆಟ್ರೋಲ್ ಬೆಲೆಯನ್ನು ತೋರಿಸಿ ಸಮರ್ಥಿಸಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು. ನಮ್ಮ ರಾಜ್ಯದ ಹಣದುಬ್ಬರ ರಾಷ್ಟ್ರದ ‌ಹಣದುಬ್ಬರಕ್ಕಿಂತ‌ ಹೆಚ್ಚಿದೆ. ಆಯಿಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ ರಾಜ್ಯ ಸರ್ಕಾರ ಕೂಡಲೇ ಪೆಟ್ರೋಲ್ ಬೆಲೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap