ಗುಬ್ಬಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆ

ಗುಬ್ಬಿ :

     ಕರ್ನಾಟಕ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕದ ವತಿಯಿಂದ 2026 ನೇ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಸಂಘದ ಕಚೇರಿಯಲ್ಲಿ ನೆರವೇರಿಸಲಾಯಿತು.

     ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಸಮೀಪದ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ನೂತನ ವರ್ಷದ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

     ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಗುಬ್ಬಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಪ್ರಸಾದ್ ಮಾತನಾಡಿ ಎಲ್ಲಾ ಪದಾಧಿಕಾರಿಗಳ ಆಶಯದಂತೆ ಇಂದು ನಮ್ಮ ಸಂಘದ 2026 ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಮಾಡಲಾಗಿದೆ. ನಿಮ್ಮೆಲ್ಲರ ಸಹಕಾರ ಮುಂದೆಯೂ ಈಗೆಯೇ ಮುಂದುವರೆಯಲಿ. ಸರ್ಕಾರಿ ನೌಕರರ ಹಿತ ಕಾಯುವ ಕೆಲಸ ಮಾಡಲು ಸಂಘ ಬದ್ಧವಾಗಿರಲಿದೆ. ಸರ್ಕಾರದಿಂದ ಅಗತ್ಯ ಸೌಲಭ್ಯ ಪಡೆಯುವಲ್ಲಿ ರಾಜ್ಯ ಘಟಕ ಚುರುಕಿನಿಂದ ಸಾಗುತ್ತಿದೆ. ನಮ್ಮ ತಾಲ್ಲೂಕು ಘಟಕ ಕೂಡಾ ತಾಲ್ಲೂಕಿನ ನೌಕರರ ಪರ ನಿಂತಿದೆ ಎಂದು ತಿಳಿಸಿದರು.

     ಇದೇ ಸಂದರ್ಭದಲ್ಲಿ ರಾಜ್ಯ ಪರಿಷತ್ ಸದಸ್ಯ ಸಿದ್ದೇಗೌಡ, ಖಜಾಂಚಿ ರಮೇಶ್, ಕಾರ್ಯದರ್ಶಿ ರಾಮಚಂದ್ರ ಮಾಜಿ ಅಧ್ಯಕ್ಷರುಗಳಾದ ಕರುಣಾಕರ ಶೆಟ್ಟಿ ಮತ್ತು ಆರ್.ಜಿ.ನಾಗಭೂಷಣ್ ಸೇರಿದಂತೆ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Recent Articles

spot_img

Related Stories

Share via
Copy link