ನವದೆಹಲಿ
ಕೊರೊನಾ ಸೋಂಕು ಹರಡುತ್ತಿದ್ದು ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆ ಕಾಣುತ್ತಿದೆ. ಕಳೆದ 24 ಗಂಟೆಗಳಲ್ಲಿ 7,633 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ದಿನನಿತ್ಯದ ಪಾಸಿಟಿವ್ ದರ 3.62% ತಲುಪಿದೆ. ಒಂದು ವಾರದ ಪಾಸಿಟಿವ್ ದರ 5.04% ತಲುಪಿದೆ.
ಈ ನೂತನ ಪಾಸಿಟಿವ್ ಪ್ರಕರಣಗಳಿಂದಾಗಿ ದೇಶದಲ್ಲಿನ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 61,233ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 6,702 ಜನ ಕೊರೊನಾ ಸೋಂಕಿತರು ಗುಣ ಮುಖರಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 4,42,42,474 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.