ಮಸೀದಿಗಳ ಆಜಾನ್ ಮೈಕ್‍ಗಳಿಗೆ ಹೊಸ ಸುತ್ತೋಲೆ ; ಸಿಎಂ ಬೊಮ್ಮಾಯಿ

ಕಲಬುರಗಿ:

ಕಲಬುರಗಿ,ಏ.22-ಮಸೀದಿಗಳಲ್ಲಿ ಆಜಾನ್ ಕುರಿತಾಗಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನೀಡಿರುವ ಆದೇಶದಂತೆ ಪ್ರತಿಯೊಬ್ಬರು ಕಾನೂನು ಪಾಲನೆ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಗಳಲ್ಲಿ ಆಜಾನ್ ಮಾಡುವ ಮೇಲೆ ಮೈಕ್‍ಗಳಿಗೆ ಎಷ್ಟುಪ್ರಮಾಣದ ಡೆಸಿಬಲ್ ಅಳವಡಿಸಬೇಕೆಂದ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಸ್ಪಷ್ಟವಾದ ಆದೇಶ ನೀಡಿದೆ. ಇದನ್ನ ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಮಾತುಕತೆ ನಡೆಸಿ ಮಸೀದಿಗಳಲ್ಲಿ ಮೈಕ್ ಅಳವಡಿಸುವ ಸಂಬಂಧ ಸುತ್ತೋಲೆ ಹೊರಡಿಸಲು ಸೂಚನೆ ನೀಡಲಾಗಿತ್ತು. ಅದರಂತೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸುತ್ತೋಲೆ ಹೊರಡಿಸಿ ಆಯಾ ಧರ್ಮಗಳ ಧಾರ್ಮಿಕ ಮುಖಂಡರ ಜೊತೆ ಮಾತುಕತೆ ನಡೆಸಲಾಗಿದೆ. ಸೌಹಾರ್ದಯುತವಾದ ವಾತಾವರಣವನ್ನು ಮೂಡಿಸಿಕೊಂಡು ಹೋಗುವಂತೆ ಸೂಚಿಸಿರುವುದಾಗಿ ತಿಳಿಸಿದರು.

ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆಯ ಆರ್ಭಟ; ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್​ ಘೋಷಣೆ

ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲರೂ ಒಟ್ಟಾಗಿ ಕುಳಿತು ಚರ್ಚಿಸಿ ಪಕ್ಷವನ್ನು ಸಂಘಟಿಸಲಿದ್ದೇವೆ. ಪಕ್ಷದಲ್ಲಿ ಯಾರೊಬ್ಬರ ನಡುವೆ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾವು ಈ ಬಾರಿ ಪಕ್ಷವನ್ನು ಮತ್ತಷ್ಟು ಸಂಘಟಿಸಿ ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ ಹಾಕಿಕೊಂಡಿದ್ದೇವೆ. ಬರಲಿರುವ ಚುನಾವಣೆಯಲ್ಲಿ ಖಂಡಿತವಾಗಿಯೂ ಹೆಚ್ಚು ಸ್ಥಾನಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 ಹಿಜಾಬ್ ವಿವಾದ; ಪಿಯು ಪರೀಕ್ಷೆ ಬರೆಯದೆಯೇ ವಾಪಸ್ ಆದ ವಿದ್ಯಾರ್ಥಿನಿಯರು

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರು ನಾಮಕರಣ ಮಾಡುವ ಕುರಿತಾಗಿ ವಿರೋಧ ವ್ಯಕ್ತವಾಗಿದೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅಂತಹ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಚರ್ಚಿಸಿಯೇ ಈ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಹೇಳಿದರು.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link