ಮಹಿಳಾ ಕೋಟಾ : ಆಡಳಿತ ಮತ್ತು ಪ್ರತಿ ಪಕ್ಷಗಳ ಸದಸ್ಯರ ನಡುವೆ ಆರೋಪ ಪ್ರತ್ಯಾರೋಪ

ನವದೆಹಲಿ : ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. ೩೩ ರಷ್ಟು ಮಹಿಳಾ ಕೋಟಾ ಜಾರಿಗೆ ತರುವ ಮೂರು ಐತಿಹಾಸಿಕ ಮಸೂದೆಗಳನ್ನು ಕೇಂದ್ರ ರ‍್ಕಾರ ಲೋಕಸಭೆಯಲ್ಲಿ ಮಂಡಿಸಿದ್ದು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಆಡಳಿತ ಮತ್ತು ಪ್ರತಿ ಪಕ್ಷಗಳ ಸದಸ್ಯರ ನಡುವೆ ಆರೋಪ ಪ್ರತ್ಯಾರೋಪ ವಾಕ್ಸಮರಕ್ಕೆ ಕಾರಣವಾಗಿದೆ.

ಇಂದಿನಿಂದ ಆರಂಭವಾದ ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ಕೇಂದ್ರ ಕಾನೂನು ಸಚಿವ ರ‍್ಜುನ್ ರಾಮ್ ಮೇಘವಾಲ್ ಅವರು ಸಂವಿಧಾನದ 131ನೇ ತಿದ್ದುಪಡಿ ಮಸೂದೆ, 2026 ಹಾಗೂ 2026 ರ ಗಡಿ ನರ‍್ಣಯ ಮಸೂದೆ ಮಂಡಿಸಿದರು. ಇದೇ ಸಂರ‍್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಮಸೂದೆ, ೨೦೨೬ ಮಂಡಿಸಿದ್ದು ರ‍್ಚೆ ಆರಂಭಗೊಂಡಿದೆ.

ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಸ್ತಾಪಗಳನ್ನು ಸಂಸತ್ತಿನಲ್ಲಿ ಮಂಡಿಸಲಾಗಿದ್ದು ಕಾವೇರಿದ ರ‍್ಚೆಗೆ ವೇದಿಕೆ ಕಲ್ಪಿಸಿದೆ.

ಮೂರು ಪ್ರಮುಖ ಮಸೂದೆಗಳ ಮೇಲಿನ ಮತದಾನ ನಾಳೆ ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ನಡೆಯಲಿದೆ.

೨೦೨೯ ರ ಲೋಕಸಭಾ ಚುನಾವಣೆಗೆ ಮುನ್ನ ಮಹಿಳಾ ಮೀಸಲಾತಿ ಕೋಟಾವನ್ನು ಜಾರಿಗೆ ತರಲು ರ‍್ಕಾರ ಯೋಜಿಸಿದ್ದು ಜನಗಣತಿ ಮಾಡದೆ ಕ್ಷೇತ್ರ ಪುನರ್ ವಿಂಗಡಣೆ ಸರಿಯಲ್ಲ ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಆಕ್ಷೇಪ ಎತ್ತಿದ್ದು ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ಪ್ರತಿರೋಧ ನೀಡಿದ್ದರಿಂದ ವಾಕ್ಸಮರಕ್ಕೆ ವೇದಿಕೆ ಆಗಿದೆ.

೨೦೨೩ರಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರ ಮಾಡಿದ ನಾರಿ ಶಕ್ತಿ ವಂದನ್ ಅಧಿನಿಯಮಕ್ಕೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಇಂದಿನಿಂದ ಮೂರು ದಿನಗಳ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಿದ್ದು ಆಡಳಿತ ಮತ್ತು ಪ್ರತಿಕ್ಷಗಳ ವಾಕ್ಸಮರಕ್ಕೆ ವೇದಿಕೆಯಾಗಿದ್ದು ಪರ ವಿರೋಧಕ್ಕೆ ವೇದಿಕೆಯಾಗಿದೆ.
ರಾಜ್ಯಗಳಿಗೆ ೮೧೫ ಸ್ಥಾನಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಳಿದ 35 ಸ್ಥಾನಗಳು ಸೇರಿದಂತೆ ಲೋಕಸಭಾ ಸದಸ್ಯ ಸ್ಥಾನಗಳನ್ನು ಸದ್ಯ ಇರುವ ೫೪೩ ಸ್ಥಾನಗಳಿಂದ ೮೫೦ಕ್ಕೆ ಹೆಚ್ಚಿಸಲು ಕೇಂದ್ರ ರ‍್ಕಾರ ಪ್ರಸ್ತಾಪಿಸಿದೆ.

ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇಕಡಾ ೩೩ರಷ್ಟು ಮೀಸಲಾತಿ ಹೆಚ್ಚಳ ಮಾಡಲು ಅನುಕೂಲವಾಗುವಂತೆ ಲೋಕಸಭೆ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆ ಭಾಗವಾಗಿ ೨೦೨೩ರ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ರ‍್ಕಾರ ಉದ್ದೇಶಿಸಿದೆ. ಜೊತೆಗೆ ೨೦೨೭ರ ಜನಗಣತಿಯಿಂದ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆ ಬರ‍್ಪಡಿಸಲು ಸಾಂವಿಧಾನಿಕ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿ, ಬದಲಾವಣೆಗಳಿಂದ ಯಾವುದೇ ಪ್ರದೇಶ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು. ಎಲ್ಲಾ ರಾಜ್ಯಗಳಲ್ಲಿ ಸೀಟುಗಳ ಹೆಚ್ಚಳವನ್ನು ಸಮತೋಲಿತ ಮತ್ತು ಪ್ರಮಾಣಾನುಗುಣ ರೀತಿಯಲ್ಲಿ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಮಹಿಳಾ ಮೀಸಲಾತಿ ಸಾಂವಿಧಾನಿಕ ತಿದ್ದುಪಡಿ ಮಸೂದೆಯ ಕುರಿತಾದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಭಾಷಣ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ರ‍್ಕಾರ ಪ್ರಸ್ತಾವಿತ ಸಂವಿಧಾನದ 131ನೇ ತಿದ್ದುಪಡಿ ಮಸೂದೆ, 2026 ಅನ್ನು ಮಂಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ರ‍್ಕಾರದ ನಡೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿವೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ರ‍್ಕಾರ ದಕ್ಷಿಣ ಭಾರತದ ರಾಜ್ಯಗಳಿಗೆ ಲೋಕಸಭಾ ಸ್ಥಾನಗಳನ್ನು ಕಡಿಮೆ ಮಾಡುವ ಹುನ್ನಾರ ನಡೆಸಿದ್ದು ಇದು ಉತ್ತರ ಭಾರತದ ರಾಜ್ಯಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಕೇಂದ್ರ ರ‍್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

೨೦೨೩ರಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿರುವ ಸಂವಿಧಾನ ೧೩೧ನೇ ತಿದ್ದುಪಡಿ ಮಸೂದೆಯನ್ನು ೨೦೨೬, ಲೋಕಸಭೆಯ ವಿಸ್ತರಣೆಗೆ ಪ್ರಸ್ತಾಪಿಸುವ ಸಾದ್ಯತೆ ಇದೆ. ಹೀಗಾಗಿ ಸಂವಿಧಾನದ ೮೧ ಮತ್ತು ೮೨ ನೇ ವಿಧಿಗಳನ್ನು ತಿದ್ದುಪಡಿ ಮಾಡಲು ಕೇಂದ್ರ ರ‍್ಕಾರ ಉದ್ದೇಶಿಸಿದ್ದು ಈ ನಡೆಯನ್ನು ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ.

ಮಹಿಳಾ ಮೀಸಲಾತಿ ಐತಿಹಾಸಿಕ ಹೆಜ್ಜೆ: ಮೋದಿ

ಮಹಿಳಾ ಮೀಸಲಾತಿ ನಾರಿಯರ ಸಬಲೀಕರಣಕ್ಕಾಗಿ ಐತಿಹಾಸಿಕ ಹೆಜ್ಜೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಬಣ್ಣಿಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನ ಮಹಿಳಾ ಸಬಲೀಕರಣದ ಕಡೆಗೆ “ಐತಿಹಾಸಿಕ ಹೆಜ್ಜೆ”. ಮಹಿಳೆಯರ ಘನತೆ ರಾಷ್ಟ್ರದ ಘನತೆ ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ. ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಕೇಂದ್ರ ರ‍್ಕಾರ ಈ ಹಾದಿಯಲ್ಲಿ ದೃಢನಿಶ್ಚಯದಿಂದ ಮುಂದುವರಿಯುತ್ತಿದೆ ಎಂದು ತಿಳಿಸಿದ್ದಾರೆ.

ದೇಶದಲ್ಲಿನ ತಾಯಂದಿರು ಮತ್ತು ಸಹೋದರಿಯರಿಗೆ ಗೌರವವೆಂದರೆ ರಾಷ್ಟ್ರದ ಗೌರವ, ಮತ್ತು ಮನೋಭಾವದಿಂದ, ನಾವು ಈ ದಿಕ್ಕಿನಲ್ಲಿ ದೃಢನಿಶ್ಚಯದಿಂದ ಮುಂದುವರಿಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ಮಹಿಳಾ ಮೀಸಲಾತಿ ಸಾಂವಿಧಾನಿಕ ತಿದ್ದುಪಡಿ ಮಸೂದೆಯ ಕುರಿತು ಲೋಕಸಭೆಯಲ್ಲಿ ಮಾತನಾಡಲಿದ್ದಾರೆ ಮತ್ತು ಶಾಸನಕ್ಕಾಗಿ ವಿವರವಾದ ಮರ‍್ಗಸೂಚಿ ರೂಪಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

2027 ರ ಜನಗಣತಿಯ ನಂತರದ ಮಿತಿ ನರ‍್ಣಯಕ್ಕೆ ಸಂಬಂಧಿಸಿದ ಪ್ರಸ್ತುತ ಸಮಯ ಬದಲಾಯಿಸುವ ಮೂಲಕ, ೨೦೨೯ ರ ಮೊದಲು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ ೩೩ ರಷ್ಟು ಮೀಸಲಾತಿ ಅನುಮತಿಸುವ ತಿದ್ದುಪಡಿಗೆ ಪರಿಚಯಿಸಲು ಇಂದಿನಿಂದ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ.

Recent Articles

spot_img

Related Stories

Share via
Copy link