ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇ : ಮಾರ್ಚ್‌ ನಲ್ಲಿ ಲೋಕಾರ್ಪಣೆ ಸಾಧ್ಯತೆ

 

ಜನಪ್ರತಿನಿಧಿಗಳ ನಡುವೆ ಹೆಸರಿನ ಗುದ್ದಾಟ

ಬೆಂಗಳೂರು

     ಬಹುದಿನಗಳಿಂದ ಕನಸಾಗಿಯೇ ಉಳಿದಿದ್ದ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇ ಇದೇ ವರ್ಷದ ಮಾರ್ಚ್‌ನಲ್ಲಿ ಲೋಕಾರ್ಪಣೆಗೊಳ್ಳುವ ನಿರೀಕ್ಷೆ ಇದ್ದು  ಬೈಪಾಸ್ ರಸ್ತೆ ಈಗಾಗಲೇ ವಾಹನ ಸಂಚಾರಕ್ಕೆ ಮುಕ್ತವಾಗಿದೆ.

    ಈ ಸದ್ಯ ಎಲ್ಲರ ತಲೆ ಕೆಡಿಸಿರಿವುದು ಒಂದೆ ರಸ್ತೆ ಮಾಡಿ ಆಗಿದೆ ಇದಕ್ಕೆ ಯಾರ ಹೆಸರು ಇಡಬೇಕು ಎಂಬುದೇ ದೊಡ್ಡ ಚರ್ಚೆಯಾಗಿದೆ .

  ಬೆಂಗಳೂರು-ಮೈಸೂರು ನಗರಗಳನ್ನು ಸಂಪರ್ಕಿಸುವ ಈ ಪ್ರಮುಖ ರಸ್ತೆ ಯೋಜನೆಯನ್ನು ತಂದಿದ್ದು ಯಾರು?. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಯೋಜನೆ ಘೋಷಣೆ ಆಗಿದ್ದು ಯಾವಾಗ, ಯಾರ ಕಾಲದಲ್ಲಿ ಆರಂಭವಾಗಿದ್ದು ಹೀಗೆ ಅನೇಕ ಪ್ರಶ್ನೆಗಳಿವೆ.

      ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಯೋಜನೆ ಬಗ್ಗೆ ಮಾಜಿ ಲೋಕೋಪಯೋಗಿ ಇಲಾಖೆಯ  ಸಚಿವ ಡಾ. ಎಚ್. ಸಿ. ಮಹದೇವಪ್ಪ ಟ್ವೀಟ್ ಮಾಡಿದ್ದಾರೆ. ‘ಬೆಂಗಳೂರು-ಮೈಸೂರು- ಬಂಟ್ವಾಳ ರಸ್ತೆ ನಿರ್ಮಾಣಕ್ಕೆ ಕಾರಣಕರ್ತರು 1) ಆಸ್ಕರ್ ಫರ್ನಾಂಡೀಸ್ 2) ಸಿದ್ದರಾಮಯ್ಯ 3) ಡಾ ಹೆಚ್ ಸಿ ಮಹದೇವಪ್ಪ 4) ನಿತಿನ್ ಗಡ್ಕರಿ. ಈ ಕೋಮು ಭಕ್ತರು ಬಾಯಿಗೆ ಬಂದಂತೆ ಮಾತಾಡಿದಾಕ್ಷಣ ಸತ್ಯವು ಎಂದಿಗೂ ಬದಲಾಗುವುದಿಲ್ಲ. ಈ ರಸ್ತೆಯನ್ನು ಮಂಜೂರು ಮಾಡಿಸಿ ಅನುದಾನ ಬಿಡುಗಡೆಯಾದಾಗ ಆ ಪ್ರತಾಪ್ ಸಿಂಹ ಎಂಪಿಯೇ ಆಗಿರಲಿಲ್ಲ!’ ಎಂದು ಹೇಳಿದ್ದಾರೆ.

        ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಅವಧಿ ಕಡಿಮೆ ಮಾಡಲಿದೆ. ಈಗಾಗಲೇ ಈ ರಸ್ತೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಸಹ ಚಿತ್ರಗಳನ್ನು ಟ್ವೀಟ್ ಮಾಡಿದ್ದರು.

      ಈ ರಸ್ತೆ ಬೆಂಗಳೂರು, ರಾಮನಗರ, ಮಂಡ್ಯ ಹಾಗೂ ಮೈಸೂರು ನಡುವೆ ಸಾಗುತ್ತದೆ. ಈ ಜಿಲ್ಲೆಗಳಲ್ಲಿ ಒಕ್ಕಲಿಗ ಸಮುದಾಯವೇ ಪ್ರಾಬಲ್ಯ ಸಾಧಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ತಂತ್ರ ರೂಪಿಸಿರುವ ಬಿಜೆಪಿ ಮತ ಬ್ಯಾಂಕ್‌ ಮೇಲೆ ಕಣ್ಣಿಟ್ಟು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಗೆ ನಾಮಕರಣ ಮಾಡುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆಯುತ್ತಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap