ಬೆಂಗಳೂರು
ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಆಂದ್ರದ ವಿಜಯವಾಡದ ವರೆಗಿನ ಆರ್ಥಿಕ ಕಾರಿಡಾರ್‌ನಲ್ಲಿ ಗ್ರೀನ್‌ಫೀಲ್ಡ್ ಹೆದ್ದಾರಿ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಆಂಧ್ರ ಪ್ರದೇಶದ ಚಂದ್ರಶೇಖರಪುರಂ ಮತ್ತು ಪೋಲಾವರಂ ನಡುವೆ 32 ಕಿಮೀ ಉದ್ದದ 6 ಲೇನ್ ಪ್ರವೇಶ ನಿಯಂತ್ರಿತ ಹೆದ್ದಾರಿ ಬರಲಿದೆ. ಇದಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಭಾರತಮಾಲಾ ಪರಿಯೋಜನಾ ಯೋಜನೆಯಡಿ ಬರುವ ಈ ಯೋಜನೆಗೆ ಅನುಮೋದನೆ ನೀಡಿದ್ದಾರೆ. 1292.65 ಕೋಟಿ ರೂಪಾಯಿ ಬಜೆಟ್‌ನಲ್ಲಿ ಹೈಬ್ರಿಡ್ ಆನ್ಯೂಟಿ ಮಾದರಿಯಲ್ಲಿ (ಎಚ್‌ಎಎಂ) ಕಾರಿಡಾರ್ ನಿರ್ಮಾಣವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ