ಬೆಂಗಳೂರು
ಭಅರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಇಂದು ಸಂಜೆ ಬೆಂಗಳೂರಿಗೆ ಆಗಮಸುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಉಪರಾಷ್ಟ್ರಪತಿ ಆಗಮನದ ಹಿನ್ನೆಲೆ ಸಿಲಿಕಾನ್ ಸಿಟಿಯ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ.
ಸಂಚಾರಿ ಪೊಲಿಸರು ಹೊರಡಿಸಿರುವ ಮಾರ್ಗಸೂಚಿಯಲ್ಲಿ ಓಲ್ಡ್ ಏರ್ ಪೋರ್ಟ್ ರಸ್ತೆ, ರಾಜಭವನ ರಸ್ತೆ, ಇನ್‌ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ ಮತ್ತು ಎಂಜಿ ರಸ್ತೆಗಳಲ್ಲಿ ವಾಹನ ನಿರ್ಬಂಧ ವಿಧಿಸಲಾಗಿದೆ. ಮಂಗಳವಾರ ಸಂಜೆ 4 ರಿಂದ ಸಂಜೆ 6 ಗಂಟೆಯವರೆಗೆ ವಾಹನ ಸವಾರರು, ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸುವಂತೆ ಸಂಚಾರಿ ಇಲಾಖೆಯು ತಮ್ಮ ಸಂಚಾರ ಸಲಹೆಯಲ್ಲಿ ಮನವಿ ಮಾಡಿದೆ.