ಬೆಂಗಳೂರು :

ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಸರ್ಜರಿ ಮಾಡಿ ಹೊಸ ಸ್ವರೂಪ ಪ್ರಕಟಿಸಿದ್ದು, ಎಂಸಿಎ ಕೋರ್ಸ್ ಎರಡು ವರ್ಷ ಎಂದು ಸ್ಪಷ್ಟಪಡಿಸಲಾಗಿದ್ದು, ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನ್ವಯ ಬಿಎಡ್ ನಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ 5 ವರ್ಷ ವಿಸ್ತರಿಸಲು ಮುಂದಾಗಿದೆ ಎನ್ನಲಾಗಿದೆ.
ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ನ ಎಸ್.ಎಲ್.ಭೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಹೊಸ ಸ್ವರೂಪ ನೀಡಲಾಗಿದ್ದು,
ಹಿಂದೂಗಳು ಯುಗಾದಿಯ ಹಬ್ಬದ ಸಮಯದಲ್ಲಿ ಹಲಾಲ್ ಮಾಂಸ, ಉತ್ಪನ್ನಗಳನ್ನು ಭಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ
ಇದರ ಜೊತೆಯಲ್ಲೇ ಹಲವು ಕೋರ್ಸ್ ಗಳ ಅವಧಿಯಲ್ಲೂ ಮಾರ್ಪಾಟಾಗಿದೆ. ಎಂಸಿಎ ಕೋರ್ಸ್ ಅವಧಿ 2 ವರ್ಷ, ಬಿಎಡ್ ವ್ಯಾಸಂಗದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ 5 ವರ್ಷಗಳ ಅವಧಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಒಟ್ಟು 54 ಖಾಸಗಿ ಅನುದಾನಿತ ಬಿ.ಇಡಿ ಕಾಲೇಜಗಳಲ್ಲಿ236 ಹಾಗೂ ಆರು ಸರ್ಕಾರಿ ಬಿ.ಇಡಿ ಕಾಲೇಜುಗಳಲ್ಲಿ 33 ಬೋಧಕರ ಹುದ್ದೆಗಳು ಖಾಲಿ ಇದ್ದು, ಕ್ರಮೇಣ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
2023ರ ಚುನಾವಣಾ ಕದನ ಎದುರಿಸಲು ಬಿಜೆಪಿ ಬತ್ತಳಿಕೆಯಲ್ಲಿ ಅಸ್ತ್ರಗಳು ರೆಡಿ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








