ಚಿತ್ರದುರ್ಗ : ಹೊಸ ಬಾಂಬ್‌ ಸಿಡಿಸಿದ ನೂತನ ಸಂಸದ

ಚಿತ್ರದುರ್ಗ

    ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 135 ಕ್ಷೇತ್ರಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಪತನಗೊಳಲಿದೆ ಎಂದು ಹಲವು ಬಿಜೆಪಿ ನಾಯಕರು ಅಚ್ಚರಿ ಹೇಳಿಕೆ ನೀಡಿದ್ದಾರೆ. ಇತ್ತ ಚಿತ್ರದುರ್ಗ ಸಂಸದರಾದ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ ನ 40 ಜನ ಶಾಸಕರು ರಾಜೀನಾಮೆ ನೀಡುವ ಚಿಂತನೆಯಲ್ಲಿದ್ದಾರೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

     ಕಾಂಗ್ರೆಸ್‌ ನ 40 ಜನ ಶಾಸನಕರು ರಾಜೀನಾಮೆ ನೀಡುವ ಚಿಂತನೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗದ ಹಿನ್ನೆಲೆಯಲ್ಲಿ ಬೇಸತ್ತಿರುವ ಕಾಂಗ್ರೆಸ್‌ನ 40 ಜನ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿಸಿದರು.

   ಕಾಂಗ್ರೆಸ್‌ ಸರ್ಕಾರ ಯಾವುದೇ ವಿವೇಚನೆ, ಲೆಕ್ಕಾಚಾರ ಇಲ್ಲದೇ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ನಂತರ ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆಯುಂಟಾಗಿದೆ. ಇದರಿಂದಾಗಿ ಕಾಂಗ್ರೆಸ್‌ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ತಿಳಿಸಿದರು. ಇನ್ನೂ ಕಾಂಗ್ರೆಸ್‌ ಸರ್ಕಾರ ಲೋಕಸಭಾ ಚುನಾವಣೆಯ ಬಳಿಕ ಪತನವಾಗಲಿದೆ ಎಂದು ಹಲವು ಬಿಜೆಪಿ ನಾಯಕರು ಚುನಾವಣೆಗೂ ಮುನ್ನೆ ಹೇಳಿಕೆಯನ್ನ ನೀಡಿದ್ದರು. ಇದೀಗ ಕಾಂಗ್ರೆಸ್‌ ಪಾಳಯದಲ್ಲಿನ ಆಂತರಕ ಒಳಜಗಳದ ನಡುವೆ ಚಿತ್ರದುರ್ಗ ಬಿಜೆಪಿ ಸಂಸದರಾದ ಗೋವಿಂದ ಕಾರಜೋ ಅವರ ಹೇಳಿಕೆ ಸಾಕಷ್ಟು ಕುತೂಹಲವನ್ನ ಹುಟ್ಟಿಸಿದೆ.

   ಇನ್ನೂ ಮುದ್ದೇಬಿಹಾಳ ಕಾಂಗ್ರೆಸ್ ಶಾಸಕ ಸಿ.ಎಸ್. ನಾಡಗೌಡ ಅವರು ‌ತಮ್ಮ ಸರ್ಕಾರದ ವಿರುದ್ಧವೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ದಿವಾಳಿಯ ಅಂಚಿಗೆ ತಲುಪಿದೆ. ಇದರ ವಿರುದ್ಧ ಒಬ್ಬೊಬ್ಬರೇ ಶಾಸಕರು ಬಂಡೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಅವರು ಆರೋಪಿಸಿದರು.

    ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತದ ಅವಧಿಯಲ್ಲಿ ಜಾರಿಗೊಳಿಸಿದ್ದ ಯೋಜನೆ ಮುಂದುವರಿಸಲು ಹಣ ಬಿಡುಗಡೆ ಮಾಡಿಲ್ಲ. ಎಸ್‌ಸಿಪಿ- ಟಿಎಸ್‌ಪಿ ಯೋಜನೆಗಳಿಗಾಗಿ ಮೀಸಲಿಟ್ಟಿದ್ದ ₹ 24,000 ಕೋಟಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗಿದೆ. ಕೂಡಲೇ ಆ ಹಣವನ್ನು ವಾಪಸ್ ಹಾಕಿ ಪರಿಶಿಷ್ಟ ಜಾತಿ, ಪಂಗಡಗಳ ಪ್ರಗತಿಗಾಗಿ ವಿನಿಯೋಗ ಮಾಡಬೇಕು ಎಂದು ಗೋವಿಂದ ಕಾರಜೋಳ ಒತ್ತಾಯಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap