ಸರ್ಕಾರಿ ನೌಕರರಿಗೆ ಸರಕಾರದಿಂದ ಬಂತು ಹೊಸ ರೂಲ್ಸ್….!

ಬೆಂಗಳೂರು:

   ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿ ‌ಎಲ್ಲಾ ಸರ್ಕಾರಿ ನೌಕರರು ನವೆಂಬರ್ 1 ರೊಳಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರ (ಟ್ಯಾಗ್) ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

  ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ʼಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡʼ ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.

   ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿ ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ತಿಳಿಸಿದ್ದಾರೆ.

   ನೂತನ ಕೊರಳುದಾರದ ವಿನ್ಯಾಸವನ್ನು https://photos.app.goo.gl/YcJeNHnDNPecW8Q48 ನ ಆನ್‌ಲೈನ್ ವಿಳಾಸದಿಂದ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. 

Recent Articles

spot_img

Related Stories

Share via
Copy link