ಬೆಂಗಳೂರು:
ಸಂಚಾರ ನಿಯಮ ಉಲ್ಲಂಘಿಸುವವರ ಕೆಲ ವಾಹನ ಸವಾರರಿಗೆ ಬಿಗಿ ಕ್ರಮ ಕೈಗೊಳ್ಳಲು ಬೆಂಗಳೂರು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಪದೇಪದೆ ನಿಯಮ ಉಲ್ಲಂಘಿಸುವವರನ್ನು ಗುರುತಿಸಿ, ಅಂಥ ವಾಹನಗಳು ಯಾವುದೇ ಕಾರಣದಿಂದ ಸಾರಿಗೆ ಕಚೇರಿಗೆ ಬಂದಾಗ ಮಾಲೀಕರಿಂದ ಅಲ್ಲಿಯೇ ದಂಡ ಕಟ್ಟಿಸಿಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.
ಇದಕ್ಕಾಗಿ 10 ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿಗಳನ್ನು ಸೇವೆಗೆ ನಿಯೋಜಿಸಲಾಗಿದೆ. ವಾಹನಗಳ ಮೇಲಿರುವ ಪ್ರಕರಣಗಳನ್ನು ಪರಿಶೀಲಿಸಿ ದಂಡ ವಸೂಲು ಮಾಡಲು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್ ರವಿಕಾಂತೇಗೌಡ ಆದೇಶ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ