ಹೊಸ ರೂಲ್ಸ್‌ ಅಪ್‌ ಡೇಟ್‌ : ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಗೆ ಹೊಸ ನಿಯಮ ಜಾರಿ …!

ಬೆಂಗಳೂರು :

   ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್್ರವೇ ಭೂ ಸುಧಾಕರಣೆ ಕಾಯ್ದೆಗೆ ತಿದ್ದುಪಡಿ ಮಾಡಲು ನಿರ್ಧರಿಸಿದೆ.ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಭೂ ಸುಧಾರಣೆಗೆ ಮರು ತಿದ್ದುಪಡಿ ತಂದು ಉದ್ಯಮಿಗಳ ಪಾಲಾಗುತ್ತಿರುವ ಕೃಷಿಕರ ಜಮೀನುಗಳನ್ನು ಮರಳಿ ಕೃಷಿಕರಿಗೆ ಮಾತ್ರ ಸೀಮಿತಗೊಳಿಸಲಾಗುವುದು.

   ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.

   ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ನಮಗೆ ಸಾಧ್ಯವಾಗಿಲ್ಲ. ವ್ಯಕ್ತಿಯನ್ನು ಜಾತಿ ಆಧಾರದಲ್ಲಿ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ಪ್ರತಿಭೆ ಮೇಲೆ, ವ್ಯಕ್ತಿತ್ವದ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ. ಆದರೆ ಯಾರೂ ಕೂಡಾ ಜಾತಿ ಆಧಾರದಲ್ಲಿ ಸಮಾಜದಲ್ಲಿ ಪ್ರತಿಭಾವಂತ ಆಗಲು ಸಾಧ್ಯವಿಲ್ಲ. ಸರಿಯಾದ ಅವಕಾಶಗಳು ಸಿಕ್ಕಿದರೆ ಮಾತ್ರ ಪ್ರತಿಭಾವಂತ ಆಗಲು ಸಾಧ್ಯ ಎಂದರು.

Recent Articles

spot_img

Related Stories

Share via
Copy link
Powered by Social Snap