ಹಾಸನ:
ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ ವಿವರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ದೂರಿನ ಅನ್ವಯ ತನಿಖೆ ಮಾಡಿ ವರದಿ ನೀಡುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.
ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ತಮ್ಮ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಸ್ತಿ ವಿಚಾರದ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಟಿ.ಜೆ.ಅಬ್ರಾಹಾಂ ಎಂಬುವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಈ ದೂರಿನ ಅನ್ವಯ ರಾಜ್ಯ ಚುನಾವಣಾ ಆಯೋಗ ಪ್ರಜ್ವಲ್ ರೇವಣ್ಣ ಅವರ ಆಸ್ತಿ ವಿವರಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಪ್ರಮಾಣ ಪತ್ರವನ್ನು ಪುರಿಶೀಲಿಸಿ ವರದಿ ನೀಡುವಂತೆ ಹಾಸನ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ಗೆ ಸೂಚಿಸಿದೆ. ಈ ಹಿಂದೆ ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಕೂಡ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
