ಬೆಂಗಳೂರು:
ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿರುವಂತೆಯೇ ಮಹಾರಾಷ್ಟ್ರ, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಹಾರಾಷ್ಟ್ರ ರಾಜ್ಯಾದ್ಯಂತ ಮತ್ತು ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು-ಮಿಂಚು ಬಿರುಗಾಳಿಸಹಿತ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಈ ಮಳೆ ಮುಂದಿನ 5 ದಿನಗಳ ಕಾಲ ಮುಂದುವೆರೆಯಲಿದೆ ಎಂದು ಎಚ್ಚರಿಕೆ ನೀಡಿದೆ. ಈಗಾಗಲೇ ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಉತ್ತರ ಕರ್ನಾಟಕದ ಬೀದರ್, ಗುಲ್ಬರ್ಗಾ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಧಾರವಾಡ, ಉಡುಪಿ ಮತ್ತು ಉತ್ತರ ಕನ್ನಡ, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.