ಬೆಂಗಳೂರು :
ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದ್ದು, ನೈಟ್ ಕರ್ಫ್ಯೂವನ್ನು ರಾತ್ರಿ 9ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕೋವಿಡ್ ಟಾಸ್ಕ್ ಫೋರ್ಸ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ, ಬಳಿಕ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ನೈಟ್ ಕರ್ಫ್ಯೂ ರಾತ್ರಿ 10ರ ಬದಲು 9 ರಿಂದ ಬೆಳಗ್ಗೆ 5 ಗಂಟೆವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.
ಕೋವಿಡ್ ನಿರ್ವಹಣೆ ಬಗ್ಗೆ ತಜ್ಞರನ್ನು ಕರೆಸಿ ಸಚಿವರು, ಅಧಿಕಾರಿಗಳ ಸಭೆ ನಡೆಸಲಾಗಿದೆ. ಈಗಿರುವ ಸ್ಥಿತಿಗತಿ ಕುರಿತು ಚರ್ಚೆ ಮಾಡಲಾಗಿದೆ. ಪಾಸಿಡಿವಿಟಿ ದರ ಹೆಚ್ಚಾಗುವ ಕುರಿತು ಚರ್ಚಿಸಿದ್ದು, ಕೆಲ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಶಾಲಾ-ಕಾಲೇಜು ಆರಂಭ ಕುರಿತು ಬೇರೆ ರಾಜ್ಯದಲ್ಲಿ ಏನಿದೆ ಎಂದು ಚರ್ಚಿಸಿ 9,10,11,12ನೇ ತರಗತಿಗಳನ್ನು ಆಗಸ್ಟ್ 23ರಿಂದ ಪ್ರಾರಂಭ ಮಾಡಲು ಅನುಮತಿ ನೀಡಲಾಗಿದೆ. ದಿನ ಬಿಟ್ಟು ದಿನದಂತೆ ಬ್ಯಾಚ್ ವೈಸ್ ಶಾಲೆಗಳನ್ನು ನಡೆಸಲು ಅನುಮತಿಸಲಾಗಿದೆ. ಕೋವಿಡ್ ನೋಡಿ ತಿಂಗಳ ಕೊನೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗಳ ಆರಂಭ ಕುರಿತು ತಜ್ಞರ ತೀರ್ಮಾನದಂತೆ ಅದನ್ನು ಜಾರಿಗೆ ತರಲಾಗುತ್ತದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ