ನಿಖಿಲ್ ಕುಮಾರಸ್ವಾಮಿಯನ್ನು ಹಗುರವಾಗಿ ಪರಿಗಣಿಸುವಂತಿಲ್ಲ: ಸಿ.ಪಿ ಯೋಗೇಶ್ವರ್

ಬೆಂಗಳೂರು: 

   ಚನ್ನಪಟ್ಟಣ ಉಪಚುನಾವಣೆದೆ ನಿಖಿಲ್ ಅವರನ್ನು ಕಣಕ್ಕಿಳಿಸುವುದು ಬಿಟ್ಟು ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಬೇರೆ ದಾರಿಯೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಡಿಸಿಎಂ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.

   ಯೋಗೇಶ್ವರ ಅವರು ಈ ಹಿಂದೆ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಶ್ರಮಿಸಿದ್ದು. ಉತ್ತಮ ಶಾಸಕರಾಗಿ ಜನಪ್ರಿಯತೆ ಪಡೆದಿರುವ ಹಿನ್ನೆಲೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಿಎಂ ಹೇಳಿದರು. ‘ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೇಶ್ವರ್ ಅವರು ಇರಬೇಕು. ಹೆಚ್.ಡಿ.ಕುಮಾರಸ್ವಾಮಿ ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು, ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೇಶ್ವರ್ ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ” ಎಂದರು.

   ಬಿಜೆಪಿಯವರು ಟಿಕೆಟ್ ನಿರಾಕರಿಸುವ ಮೂಲಕ ನನಗೆ ಅನ್ಯಾಯ ಮಾಡಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿತ್ತು. ಆದರೆ ಅದನ್ನು ಮೆಟ್ಟಿ ನಿಂತು ಕಾಂಗ್ರೆಸ್‌ ಸೇರಿದ್ದೇನೆ. ನನ್ನ ನಿರ್ಧಾರವನ್ನು ಚನ್ನಪಟ್ಟಣದ ಜನತೆ ಬೆಂಬಲಿಸುತ್ತಾರೆ. ಈ ಹಿಂದೆ ನಾನು ನಡೆಸಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಆಡಳಿತಾರೂಢ ಕಾಂಗ್ರೆಸ್‌ನಿಂದ ಇಂತಹ ಇನ್ನಷ್ಟು ಕಾಮಗಾರಿಗಳ ಭರವಸೆ ನನಗೆ ಸಹಕಾರಿಯಾಗಲಿದೆ. ನನಗೆ ಸಿಎಂ, ಡಿಸಿಎಂ ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಬೆಂಬಲ ನೀಡಿದ್ದಾರೆ ಎಂದು ಯೋಗೇಶ್ವರ ಹೇಳಿದರು. ನಿಖಿಲ್ ಸತತ ಎರಡು ಬಾರಿ ಸೋತಿದ್ದರೂ ಅವರನ್ನು ಕಡಿಮೆ ಹಗುರವಾಗಿ ಪರಿಗಣಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap