ವಾಷಿಂಗ್ಟನ್:
ಅಮೆರಿಕ ಅಧ್ಯಕ್ಷೀಯ ಚುನಾವಣೆ 2024ರಲ್ಲಿ ನಾನೂ ಕೂಡ ಸ್ಪರ್ಧಿ ಎಂದು ಸೌತ್ ಕರೊಲಿನಾದ ಮಾಜಿ ಗವರ್ನರ್, ವಿಶ್ವಸಂಸ್ಥೆಯ ಮಾಜಿ ರಾಯಭಾರಿ ನಿಕ್ಕಿ ಹ್ಯಾಲೆ ಹೇಳಿದ್ದಾರೆ.
51 ವರ್ಷದ ನಿಕ್ಕಿ ಹ್ಯಾಲೆ ಮಂಗಳವಾರ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದು, ಅಮೆರಿಕದ ಅಧ್ಯಕ್ಷೀಯ ಸ್ಥಾನದ ಚುನಾವಣೆಗೆ ತಾವು ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಈ ಮೂಲಕ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ 2024ರಲ್ಲಿ ಮತ್ತೊಮ್ಮೆ ಸ್ಪರ್ಧೆ ಮಾಡಲು ಬಯಸಿರುವ 76 ವರ್ಷದ ಡೊನಾಲ್ಡ್ ಟ್ರಂಪ್ ಅವರಿಗೆ ನಿಕ್ಕಿ ಹ್ಯಾಲೆ ಮೊದಲ ಸ್ಪರ್ಧಿಯಾಗಿದ್ದಾರೆ.
ವಿಡಿಯೊ ಸಂದೇಶದಲ್ಲಿ ತಮ್ಮ ಸ್ಪರ್ಧೆಯನ್ನು ಪ್ರಕಟಿಸಿದ ಅವರು, ದೇಶದ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಹೊಸ ಪೀಳಿಗೆಯ ನಾಯಕತ್ವ ಅಗತ್ಯವಿದೆ. ಹೀಗಾಗಿ ತಾವು ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.ಟ್ರಂಪ್ ನೇತೃತ್ವದ ಸಂಪುಟದಲ್ಲಿ ಅಧಿಕಾರಿಯಾಗಿದ್ದ ಅವರು, ತಾವು ಟ್ರಂಪ್ ಅವರಿಗೆ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಯಾಗುವುದಿಲ್ಲ ಎಂದು ಹಿಂದೆ ಹೇಳಿದ್ದರು.








