ಶಿರಸಿ:
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯುವ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಶ್ರೀ ಮಾರಿಕಾಂಬಾ ಸರಕಾರಿ ಪದವಿ ಪೂರ್ವ ಕಾಲೇಜು ಶಿರಸಿ ಇಲ್ಲಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಶ್ರೀ ವೆಂಕಟರಾವ್ ನಿಲೇಕಣಿ ಸರಕಾರಿ ಪದವಿ ಪೂರ್ವ ಕಾಲೇಜು ನಿಲೇಕಣಿ, ಶಿರಸಿ ಇದರ ವಿದ್ಯಾರ್ಥಿಗಳಾದ ಪ್ರಥಮ ಪಿಯುಸಿ ಕಲಾ ವಿಭಾಗದ ಸಿಂಚನಾ ಪಟಗಾರ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಭವಾನಿ ಮೋನಪ್ಪನವರ್ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ರಾಜ್ಯಶಾಸ್ತ್ರ ಉಪನ್ಯಾಸಕರಾದ ಉಮೇಶ್ ನಾಯ್ಕ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಯಶಸ್ವಿಗೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.








