ನವದೆಹಲಿ:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಸತತ 8ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಮಂದಗತಿಯ ಆರ್ಥಿಕ ಬೆಳವಣಿಗೆ, ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ, ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ ಏರಿಕೆ ಸವಾಲುಗಳು ಎದುರಾಗಿರುವುದರಿಂದ ಸೀತಾರಾಮನ್ ಆಯವ್ಯಯ ಮೇಲೆ ದೇಶದ ಕಣ್ಣು ನೆಟ್ಟಿದೆ.
ಇಂದು ಬೆಳಗ್ಗೆ11 ಗಂಟೆಗೆ ಸಂಸತ್ತಿನಲ್ಲಿ ಸೀತಾರಾಮನ್ ಅವರು ದಾಖಲೆಯ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ನ ಕ್ಷಣ ಕ್ಷಣದ ಮಾಹಿತಿ ಈಟಿವಿ ಭಾರತದಲ್ಲಿ ಲಭ್ಯವಿರಲಿದೆ.
ಬಡವರು, ಮಧ್ಯಮ ವರ್ಗ ಮತ್ತು ಮಹಿಳೆಯರಿಗೆ ವಿಶೇಷ ಕೊಡುಗೆ ಸಿಗುವ ನಿರೀಕ್ಷೆ ಇದೆ. ಇನ್ನು ಪ್ರಮುಖವಾಗಿ ಆದಾಯ ತೆರಿಗೆ ಸ್ಲ್ಯಾಬ್ಗಳಲ್ಲಿ ಪ್ರಮುಖ ಬದಲಾವಣೆ ಬಗ್ಗೆ ಕುತೂಹಲ ಹೆಚ್ಚಿದೆ. ಸರಕು ಮತ್ತು ಸೇವೆಗಳ ಬಳಕೆಯನ್ನು ಹೆಚ್ಚಿಸಲು ಮತ್ತು ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡಲು ಕೇಂದ್ರ ಸರ್ಕಾರವು ವಾರ್ಷಿಕ 10 ಲಕ್ಷ ರೂ.ವರೆಗಿನ ಆದಾಯದ ಮೇಲೆ ಯಾವುದೇ ತೆರಿಗೆ ವಿಧಿಸಬಾರದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.