ನೀತಿ ಸಂಹಿತೆ ಉಲ್ಲಂಘನೆ : ಕಾಂಗ್ರೇಸ್‌ ವಿರುದ್ಧ ಬಿಜೆಪಿ ದೂರು..!

ಬೆಂಗಳೂರು:

    ಮಾಧ್ಯಮಗಳಲ್ಲಿ ಜಾಹೀರಾತು ನೀಡುವ ಮೂಲಕ ರಾಜ್ಯ ಸರ್ಕಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

   ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವರು ಮಾತನಾಡಿ, ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೂ ಸರ್ಕಾರ ವಾಲ್ಮೀಕಿ ಜಯಂತಿಯಂದು ಮಾಧ್ಯಮಗಳಲ್ಲಿ ಜಾಹೀರಾತು ನೀಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದಾರೆ.

   ಈ ಕುರಿತು ಭಾರತೀಯ ಚುನಾವಣಾ ಆಯೋಗವು ಮುಖ್ಯ ಚುನಾವಣಾ ಅಧಿಕಾರಿ ಮತ್ತು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ ಎಂದು ಹೇಳಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಿನ್ನೆ ಉಪಚುನಾವಣೆ ಘೋಷಣೆಯಾಗಿದೆ. ಘೋಷಣೆಯಾದ ಮರುಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೆ ಬಂದಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಪತ್ರವನ್ನೂ ತಲುಪಿಸಿದೆ.

   ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರದ ಖರ್ಚಿನಲ್ಲಿ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸುವುದಾಗಲಿ, ಸರ್ಕಾರದ ಸಾಧನೆಗಳ ಬಗ್ಗೆ ಪ್ರಚಾರ ಮಾಡುವುದಾಗಲಿ, ಜಾಹೀರಾತುಗಳಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರುಗಳ ಫೋಟೋ ಬಳಸುವುದಾಗಲಿ ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತದೆ ಎಂಬ ವಿಷಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿದಿಲ್ಲವೇ?

    ವಾಲ್ಮೀಕಿ ಜಯಂತಿಯ ಪ್ರಯುಕ್ತ ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸರ್ಕಾರಿ ಜಾಹೀರಾತಿನಲ್ಲಿ ಸರ್ಕಾರದ ಸಾಧನೆಗಳು ಅಂತ ಹೇಳಿಕೊಂಡಿರುವ ಜೊತೆಗೆ ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿಗಳ ಫೋಟೋ ಸಹ ಬಳಸಲಾಗಿದೆ. ಒಂದು ವೇಳೆ ವಾಲ್ಮೀಕಿ ಜಯಂತಿಗೆ ಶುಭಾಶಯ ಕೋರುವ ಉದ್ದೇಶ ಮಾತ್ರ ಇದಿದ್ದರೆ, ಸರ್ಕಾರದ ಸಾಧನೆಗಳು ಹಾಗು ಸಿಎಂ ಮತ್ತು ಡಿಸಿಎಂ ಭಾವಚಿತ್ರ ಇಲ್ಲದೆ ಕೇವಲ ಶುಭಾಶಯ ಕೋರುವ ಜಾಹಿರಾತು ಪ್ರಕಟಿಸಬಹುದಿತ್ತು.

    ಆದರೆ ಸರ್ಕಾರ ಉದ್ದೇಶಪೂರ್ವಕವಾಗಿಯೇ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ.ಮಾದರಿ ನೀತಿ ಸಂಹಿತೆಯ ಎಲ್ಲ ನಿಯಮಗಳನ್ನೂ ಗಾಳಿಗೆ ತೂರಿ, ಸರ್ಕಾರಿ ಖರ್ಚಿನಲ್ಲಿ ಇಂದು ಪ್ರಕಟವಾಗಿರುವ ಜಾಹೀತರಾತನ್ನ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಿ ರಾಜ್ಯ ಸರ್ಕಾರದ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆಂದು ಹೇಳಿದ್ದಾರೆ

Recent Articles

spot_img

Related Stories

Share via
Copy link
Powered by Social Snap