ಇಂಫಾಲ್:
ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷವು ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಿಳಿಸಿದೆ.ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ನಿತೀಶ್ ಕುಮಾರ್ ನೇತೃತ್ವದ ಪಕ್ಷ ಬುಧವಾರ ತಿಳಿಸಿದೆ.
ಜೆಡಿಯು ಬೆಂಬಲ ಹಿಂಪಡೆದರೂ ಬಿರೇನ್ ಸಿಂಗ್ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ ಬಿಜೆಪಿ 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 37 ಸ್ಥಾನಗಳನ್ನು ಹೊಂದಿದೆ ಮತ್ತು ನಾಗಾ ಪೀಪಲ್ಸ್ ಫ್ರಂಟ್‌ನ ಐದು ಶಾಸಕರು ಹಾಗೂ ಮೂವರು ಪಕ್ಷೇತರರ ಬೆಂಬಲ ಹೊಂದಿದೆ.