ರಾಜ್ಯ ಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್‌……!

ಪಾಟ್ನಾ:

    ಬಿಹಾರದಲ್ಲಿ ಮಹಾಘಟಬಂಧನ್ ಜೊತೆಗಿನ ಸುಮಾರು ಎರಡೂವರೆ ವರ್ಷಗಳ ಅವಧಿಯ ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಿರುವ ಜೆಡಿಯು ಮುಖ್ಯಸ್ಥರು ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. 

    ಇಂದು ಬೆಳಗ್ಗೆ ಅವರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿ ಬೆಂಬಲದೊಂದಿಗೆ ಹೊಸ ಸರ್ಕಾರ ರಚನೆ ಮಾಡಲಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ನಿತೀಶ್ ಕುಮಾರ್ ಅಥವಾ ಜೆಡಿಯುನಿಂದ ಯಾವುದೇ ಅಧಿಕೃತ ಹೇಳಿಕೆ ಇಲ್ಲಿಯವರೆಗೂ ಹೊರಬಿದ್ದಿಲ್ಲ.

    ನಿತೀಶ್ ಕುಮಾರ್ ಅವರ ನಿರ್ಣಯದ ನಂತರವೇ ತಮ್ಮ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಬಿಹಾರ ಬಿಜೆಪಿ ಅಧ್ಯಕ್ಷ ಸಾಮ್ರಾಟ್ ಚೌಧರಿ ತಿಳಿಸಿದ್ದಾರೆ. ಬಿಜೆಪಿ ಕೋರ್ ಕಮಿಟಿ  ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಚೌಧರಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಇಲ್ಲಿಯವರೆಗೆ ರಾಜೀನಾಮೆ ನೀಡಿಲ್ಲ, ಮಹಾಮೈತ್ರಿಕೂಟ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಯಾರು ಹಿಂಪಡೆದಿಲ್ಲ, ಅಂತಹುದು ಏನಾದರೂ ನಡೆದರೆ ಮಾತ್ರ ಬಿಜೆಪಿ ಮುಂದಿನ ನಿರ್ಣಯ ಕೈಗೊಳ್ಳಲಿದೆ ಎಂದು ಹೇಳಿದರು. 

    ಕೇವಲ ಕಣ್ಣಿಗೆ ಕಾಣುವ ವಿಷಯದ ಮೇಲೆ ರಾಜಕೀಯ ಮಾಡಲಾಗುವುದಿಲ್ಲ, ಯಾರಾದರೂ ನೀಡುವ ಸಂದೇಶ ಆಧರಿಸಿ ರಾಜಕೀಯ ಮಾಡಲಾಗುತ್ತದೆ. ಪ್ರಧಾನಿ ಮೋದಿ ಅವರಲ್ಲಿ ನಮಗೆ ಸಂಪೂರ್ಣ ನಂಬಿಕೆಯಿದೆ. ಅವರಿಗೆ ಏನಾದರೂ ಸಂದೇಶ ಬಂದರೆ ನಮಗೆ ತಿಳಿಯುತ್ತದೆ ಅದರಂತೆ ನಡೆದುಕೊಳ್ಳುತೇವೆ ಎಂದರು.  ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಲ್ ಜೆಪಿ ನಾಯಕ ಚಿರಾಗ್ ಪಾಸ್ವಾನ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap