ಮೈಸೂರು:
ಬಲೂನ್ಗೆ ಗಾಳಿ ತುಂಬುವಾಗ ನೈಟ್ರೋಜನ್ ಸಿಲಿಂಡರ್ ಸ್ಫೋಟಗೊಂಡು ಒಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದು ಮೈಸೂರು ಅರಮನೆ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಲೂನ್ಗೆ ಗಾಳಿ ತುಂಬುವಾಗ ಗುರುವಾರ ರಾತ್ರಿ ದುರಂತ ನಡೆದಿದ್ದು, ಸೈಕಲ್ನಲ್ಲಿ ಬಲೂನ್ ಮಾರುತ್ತಿದ್ದ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕೋಲ್ಕತಾ ಮೂಲದ ಶಬ್ಬೀರ್, ಬೆಂಗಳೂರು ಮೂಲದ ಲಕ್ಷ್ಮಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಮಕ್ಕಳು ಕೂಡ ಗಾಯಗೊಂಡಿದ್ದು, ಇವರನ್ನೆಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ತೀವ್ರತೆಗೆ ದೇಹ ಛಿದ್ರಛಿದ್ರವಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಸೇರಿ ವಿವಿಧ ಪೊಲೀಸ್ ಅಧಿಕಾರಿಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.








