ಸೆ.20ಕ್ಕೆ ದೆಹಲಿಯಲ್ಲಿ ಎಡಪಕ್ಷಗಳ ಧರಣಿ..!

ನವದೆಹಲಿ:

  ಸದ್ಯದ ದೇಶದ ಆರ್ಥಿಕ ಬಿಕ್ಕಟ್ಟು ಮತ್ತು ದುಬಾರಿ ದಂಡ ಮುಂತಾದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಎಡಪಕ್ಷಗಳು ಇದೇ 20ರಂದು ದೆಹಲಿಯಲ್ಲಿ ಬೃಹತ್ ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿವೆ.ಐದು ಎಡಪಕ್ಷಗಳಾದ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್) ಲಿಬರೇಷನ್, ಫಾರ್ವರ್ಡ್ ಬ್ಲಾಕ್‍ ಮತ್ತು ಆರ್ ಎಸ್‍ ಪಿ ಸಹಯೋಗದಲ್ಲಿ ಸೆಪ್ಟೆಂಬರ್ 20ರಂದು ದೆಹಲಿಯಲ್ಲಿ ಜಂಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಲಾಗಿದೆ.

   ದೊಡ್ಡ ಪ್ರಮಾಣದ ಉದ್ಯೋಗ ನಷ್ಟದ ವಿರುದ್ಧ ರಾಷ್ಟ್ರ ಮಟ್ಟದ ಪ್ರತಿಭಟನೆಯನ್ನು ಕಾನ್ಸ್ಟಿಟ್ಯೂಷನ್ ಕ್ಲಬ್‍ ಸಭಾಂಗಣದಲ್ಲಿ ಏರ್ಪಡಿಸಲಾಗುವುದು ಎಂದು ಈ ಐದು ಎಡಪಕ್ಷಗಳು ಜಂಟಿ ಹೇಳಿಕೆಯಲ್ಲಿ ಪ್ರಕಟಿಸಿವೆ.ಹಣಕಾಸು ಮಂತ್ರಿಗಳು ಇತ್ತೀಚೆಗೆ ಪ್ರಕಟಿಸಿರುವ 70 ಸಾವಿರ ಕೋಟಿ ರೂಪಾಯಿಗಳ ಬೃಹತ್‍ ಮೊತ್ತದ ಹಲವು ಕ್ರಮಗಳು ಜನರಿಗೆ ಪರಿಹಾರ ಕೊಡುವುದು ಒತ್ತಟ್ಟಿಗಿರಲಿ, ಅವು ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸಲಿವೆ. ಮೂಲ ರಚನೆಗಳ ಮೇಲೆ ಸಾರ್ವಜನಿಕ ಹೂಡಿಕೆಗಳನ್ನು ಹೆಚ್ಚಿಸುವುದು, ಉದ್ಯೋಗಾವಕಾಶಗಳನ್ನು ನಿರ್ಮಿಸುತ್ತಲೇ ಜನರ ಕೈಯಲ್ಲಿ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸಬೇಕಾಗಿರುವುದು ಈಗಿನ ಅಗತ್ಯವಾಗಿದೆ ಎಂದು ಪಕ್ಷಗಳು ಕಿಡಿಕಾರಿವೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link